ಕಾರು ಡಿಕ್ಕಿ: ಅಂಗಡಿ ಎದುರು ಕುಳಿತಿದ್ದ ವೃದ್ಧೆ ಸಾವು

| Published : Feb 25 2025, 12:46 AM IST

ಸಾರಾಂಶ

ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ಧೆಗೆ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಭಾನುವಾರ ನಡೆದಿದೆ. ವಾಮದಪದವು ನಿವಾಸಿ ಸುಮತಿ (91) ಮೃತರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ಧೆಗೆ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಭಾನುವಾರ ನಡೆದಿದೆ. ವಾಮದಪದವು ನಿವಾಸಿ ಸುಮತಿ (91) ಮೃತರು.

ಅವರು ಮಗ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಸಂಜೆ ಸುಮಾರು 6.45 ರ ಸಮಯದಲ್ಲಿ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಎಂಬವರು ಚಲಾಯಿಸಿಕೊಂಡು ಬಂದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಯೊಳಗೆ ನುಗ್ಗಿದೆ. ಈ ವೇಳೆ ಅಂಗಡಿಗೆ ಬಂದಿದ್ದ ಗ್ರಾಹಕರಾದ ಲೂಯಿಸ್ ಡಿಕೋಸ್ತ ಎಂಬವರಿಗೆ ಡಿಕ್ಕಿ ಹೊಡೆದ ಕಾರು ಸುಮತಿಗೂ ಡಿಕ್ಕಿ‌ಹೊಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಸಾವು ಸಂಭವಿಸಿದೆ. ಅಪಘಾತ ದೃಶ್ಯ ಸಿ.ಸಿ.ಟಿ.ವಿ ಯಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ‌. ಗಣೇಶ್ ಮಲ್ಯ ಎಂಬವರ ದೂರಿನಂತೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೂಜಿಬಾಳ್ತಿಲ: ಹಲವರ ಮೇಲೆ ಹೆಜ್ಜೇನು ದಾಳಿ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯ ಮಾವಿಕಟ್ಟೆ ಎಂಬಲ್ಲಿ ಹಲವರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಸಂಭವಿಸಿದೆ. ಮಾವಿಕಟ್ಟೆಯ ಸಮೀಪದ ಮರದಲ್ಲಿನ ಹೆಜ್ಜೇನು ಗೂಡಿಗೆ ಹಕ್ಕಿ ಅಥವಾ ಗಿಡುಗ ಬಡಿದಿರುವುದರಿಂದ ಹೆಜ್ಜೇನುಗಳು ಹೊರಬಂದು ಜನರ ಮೇಲೆ ದಾಳಿ ನಡೆಸಿದ್ದು, ಅಲ್ಲೇ ಸಮೀಪದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದವರ ಹಾಗೂ ಮನೆಯಲ್ಲಿದ್ದವರ ಮೇಲೂ ದಾಳಿ ನಡೆಸಿದೆ. ಪರಿಣಾಮ ಕೆಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತಸೆ ಪಡೆದುಕೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.