ಕೆರೆಗೆ ಉರುಳಿದ ಕಾರು: ಓರ್ವನ ಸಾವು

| Published : May 24 2024, 12:51 AM IST

ಸಾರಾಂಶ

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರ್‌ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ ಅಂಬಳೆ ಬಳಿ ನಡೆದಿದೆ.

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರ್‌ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ ಅಂಬಳೆ ಬಳಿ ನಡೆದಿದೆ.

ದಿನೇಶ್‌ (33) ಮೃತ ದುರ್ದೈವಿ. ಕಾರಿನಲ್ಲಿದ್ದ ಇನ್ನೋರ್ವ ಪ್ರಾಣಾಪಾಯದಿಂದ ಪಾರಾಗಿದ್ದು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಡಿಹಳ್ಳಿ ನಿವಾಸಿ ದಿನೇಶ್‌ ಹಾಗೂ ಸಂತೋಷ್‌ ಗುರುವಾರ ಬೆಳಗಿನ ಜಾವ ಕಾರಿನಲ್ಲಿ ಊರಿಗೆ ತೆರಳಿದ್ದ ಸಂದರ್ಭದಲ್ಲಿ ಅಂಬಳೆ ದೊಡ್ಡ ಕೆರೆಯಲ್ಲಿ ಕಾರು ಉರುಳಿ ಬಿದ್ದಿದೆ. ದಿನೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದು, ಸಂತೋಷ್‌ ಕಾರಿನ ಗಾಜನ್ನು ಹೊಡೆದು ಹೊರಗೆ ಬಂದಿದ್ದಾರೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ದಿನೇಶ್‌ ಅವರ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಸಂತೋಷ್‌ ಅವರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರನ್ನು ಚಾಲನೆ ಮಾಡುತ್ತಿದ್ದ ಸಂತೋಷ್‌ ವಿರುದ್ಧ ದಿನೇಶ್‌ ಅವರ ಪತ್ನಿ ಚೈತ್ರಾ ದೂರು ನೀಡಿದ್ದು, ಈ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೆ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪೋಟೋ ಫೈಲ್‌ ನೇಮ್‌ 23 ಕೆಸಿಕೆಎಂ 7ಚಿಕ್ಕಮಗಳೂರು ತಾಲೂಕಿನ ಅಂಬಳೆ ದೊಡ್ಡ ಕೆರೆಗೆ ಉರುಳಿದ ಕಾರ್‌.