ಕೊಡಗಿನ ವಿವಿಧ ಕಡೆ ಕಾಳಜಿ ಕೇಂದ್ರ ಆರಂಭ

| Published : Jul 31 2024, 01:06 AM IST

ಸಾರಾಂಶ

ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮತ್ತೊಂದು ಕಡೆಯಲ್ಲಿ ಭೂಕುಸಿತ ಉಂಟಾಗುವ ಆತಂಕ ಎದುರಾಗಿದ್ದು, ಕೊಡಗಿನ ವಿವಿಧ ಕಡೆಗಳಲ್ಲಿ ಮಂಗಳವಾರ ಕಾಳಜಿ ಕೇಂದ್ರ ಆರಂಭವಾಗಿದೆ. ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು ಎರಡು ಕುಟುಂಬಗಳು ಕಾಳಜಿ ಕೇಂದ್ರದಲ್ಲಿದ್ದು ಒಟ್ಟು ಏಳು ಸದಸ್ಯರು ತಂಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ/ಸಿದ್ದಾಪುರ

ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮತ್ತೊಂದು ಕಡೆಯಲ್ಲಿ ಭೂಕುಸಿತ ಉಂಟಾಗುವ ಆತಂಕ ಎದುರಾಗಿದ್ದು, ಕೊಡಗಿನ ವಿವಿಧ ಕಡೆಗಳಲ್ಲಿ ಮಂಗಳವಾರ ಕಾಳಜಿ ಕೇಂದ್ರ ಆರಂಭವಾಗಿದೆ.

ಭಾಗಮಂಡಲ ಹೋಬಳಿಯ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು ಎರಡು ಕುಟುಂಬಗಳು ಕಾಳಜಿ ಕೇಂದ್ರದಲ್ಲಿದ್ದು ಒಟ್ಟು ಏಳು ಸದಸ್ಯರು ತಂಗಿದ್ದಾರೆ.

ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ಕಾವೇರಿ ನದಿ ದಡ ವ್ಯಾಪ್ತಿಯ ಹೊಳೆ ಕೆರೆ ಪೈಸಾರಿಯ ಪ್ರವಾಹದ ಅಪಾಯದ ಭೀತಿಯಲ್ಲಿರುವ ಕುಟುಂಬಗಳನ್ನು ಸಿದ್ದಾಪುರ ಸ್ವರ್ಣ ಮಾಲ ಕಲ್ಯಾಣ ಮಂಟಪಕ್ಕೆ ಭಾಗಶಃ ಸ್ಥಳಾಂತರಿಸಲಾಯಿತು, ಇನ್ನುಳಿದ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ.

ಸ್ಥಳಕ್ಕೆತಹಸೀಲ್ದಾರ್‌ ರಾಮಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ನಿರೀಕ್ಷಕ ಅನಿಲ್ ಸೇರಿದಂತೆ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ನೀರು ಹೆಚ್ಚಾದಲ್ಲಿ ಹೆಚ್ಚಿನ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದೆಂದು ತಿಳಿಸಿದ್ದಾರೆ.

ವಿರಾಜಪೇಟೆ ಹೋಬಳಿ ತೋರ ಗ್ರಾಮದ ಭೂಕುಸಿತ ಪ್ರದೇಶದಲ್ಲಿರುವ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿರುತ್ತದೆ. ವಿರಾಜಪೇಟೆ ಪುರಸಭೆ ಸಂಬಂಧ ಪಟ್ಟಂತೆ ಕಾಳಜಿ ಕೇಂದ್ರವನ್ನು ಸೈಂಟ್ ಅನ್ನಮ್ಮ ಶಾಲೆಯಲ್ಲಿ ತೆರೆಯಲಾಗಿದೆ.