ಮಳೆಗೆ ಕಾರುಗಳು ಮುಖಾಮುಖಿ ಡಿಕ್ಕಿ

| Published : Oct 23 2024, 12:40 AM IST

ಸಾರಾಂಶ

ಬಾಳೆಹೊನ್ನೂರುಬಾಳೆಹೊನ್ನೂರು ಸುತ್ತಮುತ್ತ ಮಂಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಬಾಳೆಹೊನ್ನೂರು ಸುತ್ತಮುತ್ತ ಮಂಗಳವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.ಬಾಳೆಹೊನ್ನೂರು-ಚಿಕ್ಕಮಗಳೂರು ಮುಖ್ಯರಸ್ತೆಯ ದೇವದಾನ ಎಸ್ಟೇಟ್ ಸಮೀಪದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆಯಲ್ಲಿ ಎರಡು ಕಾರುಗಳು ರಸ್ತೆ ಕಾಣಿಸದೇ ಮುಖಾಮುಖಿ ಡಿಕ್ಕಿಯಾಗಿ ಅಪಘಾತವಾಗಿದೆ. ಅಪಘಾತವಾದ ರಭಸಕ್ಕೆ ಎರಡೂ ಕಾರುಗಳು ನುಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಎರಡೂ ಕಾರುಗಳು ಎಲ್ಲಿಯ ಮೂಲದ್ದು ಎಂದೂ ಸಹ ತಿಳಿದಿಲ್ಲ.

೨೨ಬಿಹೆಚ್‌ಆರ್ ೫: ಬಾಳೆಹೊನ್ನೂರು ಚಿಕ್ಕಮಗಳೂರು ರಸ್ತೆಯ ದೇವದಾನ ಎಸ್ಟೇಟ್ ಸಮೀಪದಲ್ಲಿ ಕಾರುಗಳು ಅಪಘಾತವಾಗಿರುವುದು.