ಸಾರಾಂಶ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮುಗ್ದ ಹಾಗೂ ಯಾವುದೇ ತಪ್ಪು ಮಾಡದ ಹಿಂದೂ ಯುವಕರ ಮೇಲೆ ವಿನಾಕಾರಣ ಪ್ರಕರಣ ದಾಖಲು ಮಾಡಿಕೊಂಡು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದು ಖಂಡನಿಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಬಳ್ಳೇಶ್ವರ ಗ್ರಾಮದಲ್ಲಿ ಶನಿವಾರ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಡಿದರು.
ಇದೇ ಕಾಂಗ್ರೆಸ್ 2013 ರಿಂದ 2018 ರವರೆಗೆ ಅಧಿಕಾರದಲ್ಲಿದ್ದಾಗ ಕೆಲ ಹಿಂದೂ ಯುವಕರ ಹತ್ಯೆಯಾಯಿತು, ಆಗಲೂ ಸಹ ಹಿಂದುಗಳು ಭಯದ ವಾತಾವರಣದಲ್ಲಿ ಬದುಕುವಂತಾಯಿತು, ಮತ್ತೆ ಈಗ ಅಧಿಕಾರಕ್ಕೆ ಬಂದಿದ್ದಾರೆ, ಈಗಲೂ ಅದೇ ಭಯದ ವಾತವರಣದಲ್ಲಿ ನಮ್ಮ ಹಿಂದುಗಳು ಜೀವನ ಸಾಗಿಸುವಂತಾಗಿದೆ. ನಾವು ಹೀಗೆ ಇದ್ದರೆ ನಮ್ಮನ್ನು ಹೆದುರಿಸುತ್ತಾರೆ ನಾವುಗಳು ಸಹ ಪಕ್ಷಾತೀತವಾಗಿ ಹಿಂದುಗಳು ಒಗ್ಗಟ್ಟನ್ನು ಪ್ರದರ್ಶನ ಮಾಡದೇ ಇದ್ದರೆ ಕಾಂಗ್ರೆಸ್ ಸರ್ಕಾರದಲ್ಲಿ ನಮಗೆ ಉಳಿಗಾಲ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು.ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ, ಹಿಂದು ವಿರೋಧಿ ಶಕ್ತಿಗಳು ಸಮಾಜದಲ್ಲಿ ಶಾಂತಿ ಸುವ್ಯಸ್ಥೆಗೆ ಭಂಗ ತಂದು ಅಶಾಂತಿಯ ವಾತಾವರಣ ಸೃಷ್ಟಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿವೆ, ನಾವುಗಳು ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಪಿಎಫ್‍ಐ ಹಾಗೂ ಎಸ್‍ಡಿಪಿಐ ಕಾರ್ಯರ್ತರ ಮೇಲಿದ್ದ ಪ್ರಕರಣಗಳನ್ನು ಹಿಂಪಡೆದರು. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಮುಸ್ಲಿಂ ಯುವಕರು ಗಣೇಶ ಉತ್ಸವಗಳ ಮೇಲೆ ಕಲ್ಲು ಎಸಯುತ್ತಿದ್ದಾರೆ.ರಾಜ್ಯದ ದೇಗುಲ ಎನ್ನಿಸಿರುವ ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದವರನ್ನು ಬಂಧಿಸದೇ, ಗಣೇಶ ಉತ್ಸವ ಮಾಡುತ್ತಿರುವ ನಮ್ಮ ಹಿಂದು ಯುವಕರ ಮೇಲೆ ಪ್ರಕರಣಗಳನ್ನು ದಾಖಲು ಮಾಡುತ್ತಿರುವ ನಿಮಗೆ ನಾಚಿಕೆಯಾಗಬೇಕು. ಗಣೇಶ ಉತ್ಸವದ ಮೇಲೆ ಕಲ್ಲು ತೂರಾಟ ಪ್ರಕರಣಗಳಲ್ಲಿ ನಮ್ಮ ಯುವಕರ ತಪ್ಪಿಲ್ಲದಿದ್ದರೂ ಅವರನ್ನು ಪೊಲೀಸರು ಬಂಧಿಸಿದ್ದಾರೆ, ಅದರೆ ಮೆರವಣಿಗೆಗಳ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳನ್ನು ಬಂಧಿಸದೇ ದ್ವಿಮುಖ ನೀತಿ ಅನುಸರಿದುತ್ತಿದ್ದಾರೆ ಎಂದು ಆರೋಪಿಸಿದರು.
ಪೊಲೀಸರು ಈ ಕೂಡಲೇ ಹಿಂದು ಯುವಕರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆದು ಅವರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.*ಗುಂಡಿಟ್ಟು ಹೊಡೆಯಿರಿ: ಏನೂ ಅರಿಯದ ಹಿಂದೂ ಯುವಕರು ಗಣೇಶ ಮೆರವಣಿಗೆ ಮಾಡಿಕೊಂಡು ಹೋಗುವಾಗ ಮೆರವಣಿಗೆ ಮೇಲೆ ಕಲ್ಲು ಬೀಸಿದ ದುಷ್ಕರ್ಮಿಗಳ ಮೇಲೆ ಗುಂಡು ಹಾರಿಸಿ ಎಂದು ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.
*ಆದೇಶ ಹಿಂಪಡೆಯಿರಿಃ ತುಮಕೂರು ವಿಶ್ವವಿದ್ಯಾನಿಯದ ಕುಲಸಚಿವರು ಆದೇಶ ಹೊರಡಿಸಿ ತುಮಕೂರಿನ ಗಣೇಶೋತ್ಸವ ಮೆರವಣಿಗೆಗಳಲ್ಲಿ ವಿಧ್ಯಾರ್ಥಿಗಳು ಭಾಗವಹಿಸದಂತೆ ಆದೇಶ ಹೊರಡಿಸಿ ಹೇಡಿತನ ಪ್ರದರ್ಶಿಸಿದ್ದಾರೆ. ವಿಧ್ಯಾರ್ಥಿಗಳ ಸಂಯಮ ಹಾಗೂ ತಾಳ್ಮೆಯನ್ನು ಪರೀಕ್ಷಿಸದೇ ಕೂಡಲೇ ವಿಶ್ವವಿದ್ಯಾನಿಲಯವು ತಾನು ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಹಾಗೂ ಸ್ವ-ಇಚ್ಚೆಯಿಂದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಎಲ್ಲರಿಗೂ ಧಾರ್ಮಿಕ ಸ್ವತಂತ್ರ ಇದೆ ಅದನ್ನು ಕಸಿಯುವುದು ಖಂಡನಿಯ ಎಂದರು.
ಗೃಹ ಸಚಿವರು ರಾಜೀನಾಮೆ ನೀಡಲಿ: ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಇಳಿದಿರುವ ಕಾಂಗ್ರೆಸ್ ಸರ್ಕಾರ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಗೃಹ ಸಚಿವ ಡಾ.ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.