ಜಿಲ್ಲಾಧಿಕಾರಿ ಅವರು ಬಿಡನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ನಾಲ್ಕು ಜನ ಅಡುಗೆಯವರ ಮೇಲೆ ದೂರು ದಾಖಲಿಸುವಂತೆ ಸೂಚಿಸಿದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಶನಿವಾರ ಸಂಜೆ ದೂರು ನೀಡಿದ್ದಾರೆ.
ಮುಂಡರಗಿ: ತಾಲೂಕಿನ ಬಿಡನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಹಲ್ಲಿ ಬಿದ್ದಿದ್ದ ಉಪ್ಪಿಟ್ಟು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆಯಲ್ಲಿ ಸುಮಾರು 160 ವಿದ್ಯಾರ್ಥಿಗಳು ವಾಂತಿಯಿಂದ ಬಳಲಿ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಡಿಎಚ್‌ಒ ಎಸ್.ಎಸ್. ನೀಲಗುಂದ, ಡಿಡಿಪಿಐ ಆರ್.ಎಸ್. ಬುರಡಿ, ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್., ಸಿಪಿಐ ಅಯ್ಯನಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಬಿಡನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ನಾಲ್ಕು ಜನ ಅಡುಗೆಯವರ ಮೇಲೆ ದೂರು ದಾಖಲಿಸುವಂತೆ ಸೂಚಿಸಿದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಶನಿವಾರ ಸಂಜೆ ದೂರು ನೀಡಿದ್ದಾರೆ.
ಭಾನುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಹಾಗೂ ಪೊಲೀಸ್ ಅಧಿಕಾರಿ ಬೀಡನಾಳ ಗ್ರಾಮಕ್ಕೆ ತೆರಳಿ ವಿದ್ಯಾರ್ಥಿಗಳ ಪಾಲಕರನ್ನು ಭೇಟಿ ಮಾಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಮಕ್ಕಳೆಲ್ಲರೂ ಆರೋಗ್ಯವಾಗಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ''''ಕನ್ನಡಪ್ರಭ''''ಕ್ಕೆ ತಿಳಿಸಿದರು.ಇದೀಗ ಬೀಡನಾಳ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ನಾಲ್ಕು ಜನ ಅಡುಗೆದಾರರನ್ನು ಸೇವೆಯಿಂದ ವಜಾಗೊಳಿಸಿದ್ದು, ಸೋಮವಾರದಿಂದ ಬೀಡನಾಳ ಶಾಲೆಗೆ ತಾಲೂಕಿನ ಬೇರೆ ಶಾಲೆಗಳಲ್ಲಿ ಹೆಚ್ಚುವರಿ ಇರುವ ಅಡುಗೆದಾರರನ್ನು ಕರೆತಂದು ಅಡುಗೆ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ನಶಾಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ
ಗದಗ: ಇಲ್ಲಿಗೆ ಸಮೀಪದ ಹುಲಕೋಟಿ ರೂರಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಪ್ರಜಾಪಿತಾ ಈಶ್ವರೀಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ಪ್ರಜಾಪಿತಾ ಈಶ್ವರೀಯ ವಿಶ್ವವಿದ್ಯಾಲಯದ ಉಮ್ಮಾ ಅಕ್ಕ ಅವರು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳು ಹಾಗೂ ಯುವಜನತೆ ನಶೆಯಿಂದ ದೂರವಿದ್ದು, ಆರೋಗ್ಯಕರ ಮತ್ತು ಉತ್ತಮ ಜೀವನ ನಡೆಸುವ ಅಗತ್ಯತೆಯ ಕುರಿತು ಮಾತನಾಡಿದರು. ನಶಾಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.ಕಾಲೇಜಿನ ಆಡಳಿತಾಧಿಕಾರಿ ಡಾ. ವಿ.ಎಂ. ಪಾಟೀಲ, ಪ್ರಾಂಶುಪಾಲ ಡಾ. ಬಿ.ಎನ್. ಪಾಟೀಲ, ಕಾರ್ಯಕ್ರಮಾಧಿಕಾರಿ ಪಿ.ಆರ್. ಪಾಟೀಲ ಉಪಸ್ಥಿತರಿದ್ದರು.ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಶಾಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞೆ ಸ್ವೀಕರಿಸಿದರು. ನಶೆಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.