ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ.7 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ನಗರದಲ್ಲಿ ಮನೆ ಮನೆಗೆ ತೆರಳಿ ಮತದಾರರ ಚೀಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿತರಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ.7 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ನಗರದಲ್ಲಿ ಮನೆ ಮನೆಗೆ ತೆರಳಿ ಮತದಾರರ ಚೀಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿತರಿಸಿದರು.ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೊಂಧಳಿ ಗಲ್ಲಿಯ ಮನೆಗಳಿಗೆ ಶುಕ್ರವಾರ ಭೇಟಿ ನೀಡಿ ಮತದಾರರ ಚೀಟಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಮತದಾರರು ತಮ್ಮ ಹೆಸರಿರುವ ಮತಗಟ್ಟೆಗಳನ್ನು ಗುರುತಿಸಲು ಮತದಾರರ ಚೀಟಿಯಿಂದ ಅನುಕೂಲವಾಗಲಿದೆ. ಮತಗಟ್ಟೆಗಳ ಬಗ್ಗೆ ಖಚಿತ ಮಾಹಿತಿ ಲಭಿಸುವುದರಿಂದ ಮತದಾನದ ದಿನದಂದು ಮತಗಟ್ಟೆ ಹುಡುಕುವ ಗೊಂದಲ ಇರುವುದಿಲ್ಲ ಎಂದರು.ಮತದಾರರಿಗೆ ಅನುಕೂಲ ಕಲ್ಪಿಸುವುದರ ಜತೆಗೆ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಎಲ್‌ಒ ಗಳು ಮನೆ ಮನೆಗಳಿಗೆ ತೆರಳಿ ಮತದಾರರ ಚೀಟಿಗಳನ್ನು ವಿತರಿಸಲಿದ್ದಾರೆ. ಸಾರ್ವಜನಿಕರು ಮತದಾರರ ಚೀಟಿಗಳನ್ನು ಪಡೆದುಕೊಂಡು ನಿಗದಿತ ಮತಗಟ್ಟೆಗಳಿಗೆ ತೆರಳಿ ತಪ್ಪದೇ ತಮ್ಮ ಅಮೂಲ್ಯ ಮತವನ್ನು ಚಲಾಯಿಸಬೇಕು ಎಂದು ಮನವಿ ಮಾಡಿಕೊಂಡರು.
ಪ್ರೊಬೇಷನರಿ ಐಎಎಸ್. ಅಧಿಕಾರಿ ಶುಭಂ ಶುಕ್ಲಾ, ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.