ಜನಗಣತಿಯೊಂದಿಗೆ ಜಾತಿಗಣತಿ: ಕೇಂದ್ರದ ನಿರ್ಧಾರ ಸ್ವಾಗತಾರ್ಹ

| Published : May 05 2025, 12:45 AM IST

ಜನಗಣತಿಯೊಂದಿಗೆ ಜಾತಿಗಣತಿ: ಕೇಂದ್ರದ ನಿರ್ಧಾರ ಸ್ವಾಗತಾರ್ಹ
Share this Article
  • FB
  • TW
  • Linkdin
  • Email

ಸಾರಾಂಶ

ಸೊರಬ: ಕೇಂದ್ರ ಸರ್ಕಾರ ಎಲ್ಲಾ ವರ್ಗದ ಜನರ ಆರ್ಥಿಕ ಪ್ರಗತಿಗಾಗಿ ಹಾಗೂ ದೇಶದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಜನಗಣತಿ ಜೊತೆಗೆ ಜಾತಿ ಗಣತಿಗೆ ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಬಿಜೆಪಿ ಮುಖಂಡ ಡಾ.ಎಚ್.ಇ.ಜ್ಞಾನೇಶ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಲವು ಧರ್ಮ, ಜಾತಿಗಳ ಸಂಗಮವಾಗಿರುವ ದೇಶದಲ್ಲಿ ಭಾವೈಕ್ಯತೆ ಮತ್ತು ಭ್ರಾತೃತ್ವ ಭಾವನೆ ಎದ್ದು ಕಾಣುತ್ತಿದೆ. ದೇಶದಲ್ಲಿ ಬಿಜೆಪಿ ಸಾಮಾಜಿಕ ನ್ಯಾಯವನ್ನು ವೈಜ್ಞಾನಿಕವಾಗಿ ಕೊಡುವ ಪ್ರಯತ್ನ ನಡೆಸುತ್ತಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಅನನ್ಯತೆಯನ್ನು ಒಟ್ಟುಗೂಡಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿ ಗಣತಿಗೆ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿರುವುದನ್ನು ಸ್ವಾಗತಿಸುತ್ತೇನೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಧರ್ಮ ಮತ್ತು ಜನಾಂಗವನ್ನು ಓಲೈಸುವ ಪ್ರಯತ್ನದಲ್ಲಿ ಜಾತಿಗಣತಿ ಕಾರ್ಯಕ್ಕೆ ಮುಂದಾಗಿರುವುದು ಖಂಡನೀಯ. ರಾಜ್ಯದಲ್ಲಿ ಜಾತಿ ಗಣತಿಯಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುವ ರೀತಿಯಲ್ಲಿ ಸರ್ವೆ ಕಾರ್ಯವಾಗಿದೆ. ಕೇಂದ್ರ ಸರ್ಕಾರ ಜನಗಣತಿಯಿಂದ ಸರ್ವ ಜನಾಂಗಕ್ಕೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಪಾಣಿ ರಾಜಪ್ಪ, ಜಾನಕಪ್ಪ ಯಲಸಿ, ಶಿವಾನಂದ ತೆಲಗುಂದ್ಲಿ ಇದ್ದರು.