ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಪರಾಧಿಕ ಪ್ರಕರಣಗಳಲ್ಲಿ ಕ್ಷಿಪ್ರವಾಗಿ ಭೇದಿಸಿ, ತಪ್ಪಿತಸ್ಥರನ್ನು ಬಂಧಿಸಿ, ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿರ್ವಹಿಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇಲಾಖೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಮುದಾಯದ ಪರವಾಗಿ ಅಭಿನಂದಿಸಿತು.
ಉಡುಪಿ : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಪರಾಧಿಕ ಪ್ರಕರಣಗಳಲ್ಲಿ ಕ್ಷಿಪ್ರವಾಗಿ ಭೇದಿಸಿ, ತಪ್ಪಿತಸ್ಥರನ್ನು ಬಂಧಿಸಿ, ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿರ್ವಹಿಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇಲಾಖೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಸಮುದಾಯದ ಪರವಾಗಿ ಅಭಿನಂದಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿ ಮಾಡಿದ ಕಥೊಲಿಕ್ ಸಭಾ ನಿಯೋಗ ಅವರಿಗೆ ಅಭಿನಂದನೆಯನ್ನು ತಿಳಿಸಿತು.ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಶಿರ್ವ, ಇತ್ತೀಚೆಗೆ ನಡೆದ ಕೆಲವೊಂದು ಘಟನೆಗಳು ಕ್ರೈಸ್ತ ಸಮುದಾಯಕ್ಕೆ ಆಘಾತ ತಂದಿದ್ದವು. ಆದರೆ ಪ್ರಕರಣಗಳನ್ನು ಅತೀ ಶೀಘ್ರವಾಗಿ ಭೇದಿಸಿ ಅಪರಾಧಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆ ಕ್ರಮ ಶ್ಲಾಘನೀಯವಾಗಿದೆ. ಪೊಲೀಸ್ ಇಲಾಖೆಯ ಕಾರ್ಯವೈಖರಿಗೆ ಸಮಾಜದಲ್ಲಿ ಶ್ಲಾಘನೆ ವ್ಯಕ್ತವಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಸಹಕಾರ ಸದಾ ನೀಡುವುದಾಗಿ ಹೇಳಿದರು.ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್ಪಿ ಹರಿರಾಮ್ ಶಂಕರ್, ಈ ಯಶಸ್ಸು ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಶ್ರಮ ಮತ್ತು ಸಹಕಾರದಿಂದ ಸಾಧ್ಯವಾಗಿದೆ. ಕ್ರೈಸ್ತ ಸಮುದಾಯದ ತೋರಿದ ಪ್ರೀತಿಯನ್ನು ಸದಾ ಗೌರವಿಸುವುದಾಗಿ ಹೇಳಿದರು.ನಿಯೋಗದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ ವಂ|ಅನಿಲ್ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಜುಲಿಯೆಟ್ ಡಿಸೋಜಾ, ಕೋಶಾಧಿಕಾರಿ ಗ್ಯಾರಿಫಿಲ್ಡ್ ಉರ್ಬನ್ ಲೂವಿಸ್, ನಿಯೋಜಿತ ಅಧ್ಯಕ್ಷ ಲೂವಿಸ್ ಡಿಸೋಜಾ, ಎಐಸಿಯು ರಾಜ್ಯಾಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಉಡುಪಿ ಪ್ರದೇಶದ ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್, ಮೇರಿ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಶಿರ್ವ ವಲಯಾಧ್ಯಕ್ಷ ಜೆರಾಲ್ಡ್ ರೊಡ್ರಿಗಸ್, ಉಡುಪಿ ವಲಯಾಧ್ಯಕ್ಷ ಕಿರಣ್ ಲೂವಿಸ್,ಕಲ್ಯಾಣಪುರ ವಲಯಾಧ್ಯಕ್ಷ ಜೊಯೆಲ್ ಆಲ್ಮೇಡಾ, ಪದಾಧಿಕಾರಿಗಳಾದ ರೊಸಾರಿಯೋ ಡಿಸೋಜಾ ಇತರರು ಉಪಸ್ಥಿತರಿದ್ದರು.