ಜಾನುವಾರು ಜಾತ್ರೆ: ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ

| Published : Feb 10 2024, 01:45 AM IST

ಜಾನುವಾರು ಜಾತ್ರೆ: ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಬಾದಾಮಿ: ಕರೋನಾ ಸೇರಿದಂತೆ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಬಾದಾಮಿ ಬನಶಂಕರಿ ದೇವಿ ಜಾತ್ರೆಯಲ್ಲಿನ ಜಾನುವಾರು ಜಾತ್ರೆ ಆರಂಭವಾಗಿದ್ದು, ಜಾತ್ರೆಯಲ್ಲಿ ಉತ್ತಮ ಜಾನುವಾರುಗಳಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಪ್ರಶಸ್ತಿ ನೀಡಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಕರೋನಾ ಸೇರಿದಂತೆ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಬಾದಾಮಿ ಬನಶಂಕರಿ ದೇವಿ ಜಾತ್ರೆಯಲ್ಲಿನ ಜಾನುವಾರು ಜಾತ್ರೆ ಆರಂಭವಾಗಿದ್ದು, ಜಾತ್ರೆಯಲ್ಲಿ ಉತ್ತಮ ಜಾನುವಾರುಗಳಿಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಪ್ರಶಸ್ತಿ ನೀಡಿ ಗೌರವಿಸಿದರು.

ನಗರದ ಹೊರವಲಯದ ಎಪಿಎಂಸಿ ಆವರಣದಲ್ಲಿ ಉತ್ತಮ ರಾಸುಗಳಿಗೆ ಶಾಸಕರು 10 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿದರು. ಎಪಿಎಂಸಿ ಕಾರ್ಯದರ್ಶಿ ರವಿ ರಾಠೋಡ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಕಾಂತ ಸಬನೀಸ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ ತಿರಕನ್ನವರ, ಮುಖಂಡರಾದ ಶಿವುಕುಮಾರ ಹಿರೇಮಠ, ಪುರಸಭೆ ಸದಸ್ಯ ಮಂಜುನಾಥ ಹೊಸಮನಿ, ಎಪಿಎಂಸಿ ಸಹ ಕಾರ್ಯದರ್ಶಿ ಸಿ.ಎಸ್.ಅಂಗಡಿ ಸೇರಿ ಇತರರು ಇದ್ದರು.