ಸಾರಾಂಶ
ಬಾದಾಮಿ: ಸುಕ್ಷೇತ್ರ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿರುವ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಜ.೩೦ ರಿಂದ ಫೆ.೩ರವರೆಗೆ ಎಪಿಎಂಸಿ ಆವರಣದಲ್ಲಿ ಜಾನುವಾರು ಜಾತ್ರೆ ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಬಾದಾಮಿ
ಸುಕ್ಷೇತ್ರ ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿರುವ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ನಗರದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ಜಾನುವಾರು ಜಾತ್ರೆ ಹಾಗೂ ಗಣರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬನಶಂಕರಿದೇವಿ ಜಾತ್ರೆಯ ಅಂಗವಾಗಿ ಜ.೩೦ ರಿಂದ ಫೆ.೩ರವರೆಗೆ ಎಪಿಎಂಸಿ ಆವರಣದಲ್ಲಿ ಜಾನುವಾರು ಜಾತ್ರೆ ಹಮ್ಮಿಕೊಳ್ಳಲಾಗಿದ್ದು, ಜಾನುವಾರು ಜಾತ್ರೆಗೆ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು. ಜ.೨೬ರಂದು ಗಣರಾಜ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆ ಮಾಡಬೇಕು ಎಂದು ತಹಸೀಲ್ದಾರ್ ಸೇರಿದಂತೆ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ವೇದಿಕೆಯ ಮೇಲೆ ತಹಶೀಲ್ದಾರ್ ಜೆ.ಬಿ. ಮಜ್ಜಗಿ, ತಾಪಂ ಇಒ ಮಲ್ಲಿಕಾರ್ಜುನ ಬಡಿಗೇರ, ಸಿಪಿಐ ಡಿ.ಡಿ. ಧೂಳಖೇಡ, ಪಿಎಸ್ಐ ನಿಂಗಪ್ಪ ಪೂಜಾರ ಉಪಸ್ಥಿತರಿದ್ದರು. ಸಭೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ರವಿ ರಾಠೋಡ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ ಸಬನೀಸ್, ಬಿಇಒ ಎನ್.ವೈ. ಕುಂದರಗಿ, ಸಮಾಜ ಕಲ್ಯಾಣ ಇಲಾಖೆ ಎಂ.ಎಸ್. ಮಳಿಮಠ, ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.