ಸಾರಾಂಶ
ರಾಮನಗರ: ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಂತೋಷದ ಸಂಗತಿಯಾದರೂ 40ರಿಂದ 60 ವರ್ಷದೊಳಗಿನ ವಯೋಮಾನದ ಶಿಕ್ಷಕರು ದೈಹಿಕ ಕ್ರೀಡೆಗಳಲ್ಲಿ ಅತಿ ಜಾಗರೂಕರಾಗಿ ಎಚ್ಚರಿಕೆ ವಹಿಸಿ ಪಾಲ್ಗೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ವಿ.ಸಿ.ಬಸವರಾಜೇಗೌಡ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ, ರಾಮನಗರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ಸರ್ಕಾರಿ ನೌಕರರ 2023-24ನೇ ಸಾಲಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.ಕ್ರೀಡೆಗಳಲ್ಲಿ ದೈಹಿಕ ಕ್ರೀಡೆಗಳನ್ನು ಆಡುವಾಗ ಉಂಟಾಗುವ ಎಡರು-ತೊಡರುಗಳಿಂದ ಏಳುವುದು-ಬೀಳುವುದು ಸಹಜ. ಆದ್ದರಿಂದ ಇಂತಹ ಅವಘಡಗಳಿಂದ ಉಂಟಾಗುವ ದೈಹಿಕ ತೊಂದರೆಗಳನ್ನು ನಿವಾರಿಸಿಕೊಳ್ಳಲು ಸಮಯಾವಕಾಶ ಹಿಡಿಯುವುದರ ಜೊತೆಗೆ ನೋವನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಆಟಗಾರರೂ ಹವ್ಯಾಸವಿರುವ ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಸತೀಶ್ ಮಾತನಾಡಿ, ರಾಜ್ಯಾದ್ಯಂತ ಸುಮಾರು 2.50 ಲಕ್ಷ ಸರ್ಕಾರಿ ಖಾಲಿ ಹುದ್ದೆಗಳಿದ್ದು ಈ ಖಾಲಿ ಹುದ್ದೆಗಳ ಕೆಲಸಗಳನ್ನು ಹಾಲಿ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರೇ ನಿರ್ವಹಿಸುತ್ತಿರುವುದರಿಂದ ಆ ನೌಕರರು ಹೆಚ್ಚಿನ ಒತ್ತಡದಲ್ಲಿ ಬದುಕುತ್ತಿದ್ದಾರೆ. ಸರ್ಕಾರ ಕೂಡಲೇ ಈ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಹೇಳಿದರು.`ನಮ್ಮ ಆರೋಗ್ಯ ನಮ್ಮ ಹಕ್ಕು''''. ಆದ್ದರಿಂದ ಸರ್ಕಾರಿ ನೌಕರರಾಗಿ ಸಾರ್ವಜನಿಕರ ಸೇವೆ ಸಲ್ಲಿಸುವ ನಾವುಗಳು ಮೊದಲು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ಅದಕ್ಕಾಗಿ ಇಂತಹ ಕ್ರೀಡೆಗಳಲ್ಲಿ ಭಾಗವಹಿಸುವುದು ಸ್ಪಲ್ಪ ಮಟ್ಟಿಗಾದರೂ ನಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ರಾಜೇಗೌಡ, ಬೈರಪ್ಪ, ಪುಟ್ಟಸ್ವಾಮಿಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಮಸಂಜೀವಯ್ಯ, ಗೌರವ ಅಧ್ಯಕ್ಷರಾದ ಕಾಂತರಾಜು, ಜಿಲ್ಲಾ ಉಪಾಧ್ಯಕ್ಷರಾದ ಪ್ರದೀಪ್ ಎಂ, ನಾಗರಾಜು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ರೇಣುಕಯ್ಯ, ತಾಲೂಕು ಅಧ್ಯಕ್ಷರಾದ ರಂಗಸ್ವಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.24ಕೆಆರ್ ಎಂಎನ್ 1.ಜೆಪಿಜಿ
ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲೂಕು ಸರ್ಕಾರಿ ನೌಕರರ 2023-24ನೇ ಸಾಲಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಬಸವರಾಜೇಗೌಡ ಮಾತನಾಡಿದರು.