ನಾಡಹಬ್ಬ ದಸರಾ ಪ್ರಯುಕ್ತ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನವನದಲ್ಲಿ ಅ.16 ರಿಂದ 21 ರವರೆಗೆ ಕಾವೇರಿ ಆರತಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ನಾಡಹಬ್ಬ ದಸರಾ ಪ್ರಯುಕ್ತ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನವನದಲ್ಲಿ ಅ.16 ರಿಂದ 21 ರವರೆಗೆ ಕಾವೇರಿ ಆರತಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಜಿಲ್ಲಾಡಳಿತದಿಂದ ಕೆಆರ್‌ಎಸ್ ಬೃಂದಾವನ ಉದ್ಯಾನವನದಲ್ಲಿ ಅ.16ರ ಶುಕ್ರವಾರ ಸಂಜೆ 6 ಗಂಟೆಗೆ ಕಾವೇರಿ ಆರತಿಗೆ ಚಾಲನೆ ದೊರೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಾಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾಸಂಸ್ಥಾನ ಮಠದ ಅಧ್ಯಕ್ಷ ಡಾ.ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿ, ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಮಹಾ ಸ್ವಾಮೀಜಿ, ಕೆಂಗೇರಿ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಕಲಬುರ್ಗಿ ಜಿಲ್ಲೆ ಕೊಡ್ಲಾ ಉರಿಲಿಂಗಪೆದ್ದೇಶ್ವರ ಮಹಾಸಂಸ್ಥಾನ ಮಠದ ಜಗದ್ಗುರು ಜ್ಞಾನಪ್ರಕಾಶ ಸ್ವಾಮೀಜಿ, ಮೈಸೂರು ಭಾಗದ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠದ ಜಗದ್ಗುರು ಶಿವಾನಂದಾಪುರಿ ಸ್ವಾಮೀಜಿ ಅವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ ಎಂದರು.ಅ.16ರಂದು ಸಂಜೆ 6 ಗಂಟೆಗೆ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ, ಮುಜರಾಯಿ ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಉಪಸ್ಥಿತಿ ವಹಿಸಲಿದ್ದಾರೆ ಎಂದರು.
ಸೆಸ್ಕ್ ಅಧ್ಯಕ್ಷರೂ ಆದ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಅತಿಥಿಗಳಾಗಿ ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್. ಆತ್ಮಾನಂದ, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ.ಡಿ. ಗಂಗಾಧರ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ ಹಾಗೂ ಬಿ.ಎಸ್. ಶಿವಣ್ಣ, ಶಾಸಕರಾದ ಪಿ. ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು ಹಾಗೂ ಕೆ.ಎಂ. ಉದಯ, ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವಿಜಯಲಕ್ಷ್ಮಿ ರಘುನಂದನ್ ಹಾಗೂ ಶ್ರೀರಂಗಪಟ್ಟಣ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಎಂ.ಎಲ್. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಜಿ.ಎಸ್, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರತೀಕ್ ಹೆಗ್ಡೆ, ಜಿಪಂ ಉಪ ಕಾರ್ಯದರ್ಶಿ ದರ್ಜೆ 2 ಪಿ.ಲಕ್ಷ್ಮಿ, ತಹಸೀಲ್ದಾರ್ ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ್ ರವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.