ಸಾರಾಂಶ
ಕೇಂದ್ರ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿ ಕರ್ನಾಟಕದಲ್ಲಿರುವ ನೀರಿನ ಪರಿಸ್ಥಿತಿ, ಸಮಿತಿಯ ಶಿಫಾರಸಿನಿಂದ ಆಗಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದ ಕಾವೇರಿ ಜಲಾಶಯಗಳಿಂದ ನಿತ್ಯ ತಮಿಳುನಾಡಿಗೆ ೧೧,೫೦೦ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಮಾಡಿರುವ ಶಿಫಾರಸನ್ನು ಕೂಡಲೇ ರದ್ದುಪಡಿಸುವಂತೆ ಮಂಡ್ಯ ಲೋಕಸಭಾ ಸದಸ್ಯರೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒತ್ತಡ ಹಾಕಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಒತ್ತಾಯಿಸಿದರು.ಲೋಕಸಭಾ ಚುನಾವಣೆ ವೇಳೆ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸುವ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಕುರಿತು ಭರವಸೆ ನೀಡಿದ್ದರು. ಇದೀಗ ನೀರಿಗಾಗಿ ತಮಿಳುನಾಡು ಬೇಡಿಕೆ ಇಟ್ಟಿದ್ದು, ಈ ಅವೈಜ್ಞಾನಿಕ ಶಿಫಾರಸನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಪಡಿಸಿದರು.
ಕೇಂದ್ರ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿ ಕರ್ನಾಟಕದಲ್ಲಿರುವ ನೀರಿನ ಪರಿಸ್ಥಿತಿ, ಸಮಿತಿಯ ಶಿಫಾರಸಿನಿಂದ ಆಗಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮೈಸೂರು ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೆ ಕೇಂದ್ರ ಸಚಿವರು ಅನಗತ್ಯ ಹೇಳಿಕೆ ನೀಡುವ ಮೂಲಕ ಜಿಲ್ಲಾ ಮತ್ತು ರಾಜ್ಯದ ಜನರಿಗೆ ಗೊಂದಲ ಮೂಡಿಸುತ್ತಿರುವುದನ್ನು ಖಂಡಿಸುವುದಾಗಿ ತಿಳಿಸಿದರು.
ಮುಖಂಡರಾದ ಸಿ.ಆರ್. ರಮೇಶ್, ದೇಶಹಳ್ಳಿ ಮೋಹನ್‌ಕುಮಾರ್, ರಾಜೇಶ್ ಗೋಷ್ಠಿಯಲ್ಲಿದ್ದರು.ಕೆಆರ್ ಎಸ್ ನೀರಿನ ಮಟ್ಟಗರಿಷ್ಠ ಮಟ್ಟ - 124.80 ಅಡಿಇಂದಿನ ಮಟ್ಟ – 104.62 ಅಡಿ
ಒಳ ಹರಿವು – 3101 ಕ್ಯುಸೆಕ್
ಹೊರ ಹರಿವು – 2257 ಕ್ಯುಸೆಕ್
ನೀರಿನ ಸಂಗ್ರಹ – 26.653 ಟಿಎಂಸಿ