ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠ ಮಠಾಧೀಶರು ಹಾಗೂ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮಾರ್ಗದರ್ಶಕರು ಆಗಿರುವ ಶ್ರೀ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಈ ಆಂದೋಲನದ ಬಗ್ಗೆ ಮಾಹಿತಿ ನೀಡಿ, ಕಾವೇರಿ ನದಿ ಇತ್ತೀಚೆಗೆ ಕಲುಷಿತಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ 15ವರ್ಷಗಳಿಂದ ಸ್ವಚ್ಛ ಕಾವೇರಿಗಾಗಿ ಶ್ರೀ ಕ್ಷೇತ್ರ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್ ಹಾರ್ ತನಕ ಜಾಗೃತಿ ಯಾತ್ರೆ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕನ್ನಡಪ್ರಭವಾರ್ತೆ, ರಾಮನಾಥಪುರ
ಇಲ್ಲಿಯ ರಾಮೇಶ್ವರಸ್ವಾಮಿ ದೇವಾಲಯದ ಪಕ್ಕದಲ್ಲಿರುವ ಕಾವೇರಿ ನದಿ ವಹ್ನಿ ಪುಷ್ಕರಣಿಯಲ್ಲಿ ಅ.27ರಂದು ಬೆಳಿಗ್ಗೆ 10 ಗಂಟೆಗೆ ಕಾವೇರಿ ನದಿ ಸ್ವಚ್ಛತಾ ಅಂದೋಲನ ಅಶ್ರಯದಲ್ಲಿ ತಲಕಾವೇರಿಯಿಂದ ಜಾಗೃತಿ ರಥಯಾತ್ರೆಯಲ್ಲಿ ಬರುವ ಕಾವೇರಮ್ಮನವರಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಾಥಪುರದಲ್ಲಿ ವರದಿಗಾರರೊಂದಿಗೆ ಮಾತನಾಡಿ, ಅಖಿಲ ಭಾರತ ಸನ್ಯಾಸಿ ಸಂಘ, ಕೊಡಗು ಮತ್ತು ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದಲ್ಲಿ ಸ್ವಚ್ಛ ಕಾವೇರಿಗಾಗಿ 16ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆ ಅಕ್ಟೋಬರ್ 25ರಿಂದ ಚಾಲನೆ ಗೊಳ್ಳಲಿದೆ ಎಂದರು.ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠ ಮಠಾಧೀಶರು ಹಾಗೂ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮಾರ್ಗದರ್ಶಕರು ಆಗಿರುವ ಶ್ರೀ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಈ ಆಂದೋಲನದ ಬಗ್ಗೆ ಮಾಹಿತಿ ನೀಡಿ, ಕಾವೇರಿ ನದಿ ಇತ್ತೀಚೆಗೆ ಕಲುಷಿತಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ 15ವರ್ಷಗಳಿಂದ ಸ್ವಚ್ಛ ಕಾವೇರಿಗಾಗಿ ಶ್ರೀ ಕ್ಷೇತ್ರ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್ ಹಾರ್ ತನಕ ಜಾಗೃತಿ ಯಾತ್ರೆ ನಡೆಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ತಮಿಳುನಾಡು ಕರ್ನಾಟಕ ಸೇರಿ ದಕ್ಷಿಣ ಭಾರತದ ಸಾಧು ಸಂತರು ಹಾಗೂ ಕಾರ್ಯಕರ್ತರ ತಂಡ ಒಂದು ತಿಂಗಳ ಕಾಲ ನದಿ ತಟದಲ್ಲಿ ಸಾಗಿ ನದಿ ಮಹತ್ವದ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುತ್ತಿದೆ ಎಂದರು.ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್ ಮಾತನಾಡಿ, 16ನೇ ವರ್ಷದ ಕಾವೇರಿ ಜಾಗೃತಿ ಯಾತ್ರೆ ಅಕ್ಟೋಬರ್ 26ರಂದು ತಲಕಾವೇರಿ ಕ್ಷೇತ್ರದಲ್ಲಿ ಚಾಲನೆಗೊಳ್ಳಲಿದೆ. 26ರ ಸಂಜೆ 4 ಗಂಟೆಗೆ ಕುಶಾಲನಗರದಲ್ಲಿ ಕಾವೇರಿಗೆ ಮಹಾ ಆರತಿ ಕಾರ್ಯಕ್ರಮ, 27ರಂದು ಬೆಳಿಗ್ಗೆ 11 ಗಂಟೆಗೆ ರಾಮನಾಥಪುರ ಕಾವೇರಿ ನದಿಗೆ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ದಕ್ಷಿಣ ಭಾರತದ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ನವೆಂಬರ್ 18ರ ತನಕ ಕಾವೇರಿ ನದಿ ತಟದಲ್ಲಿ ಯಾತ್ರೆ ಸಾಗಲಿದೆ. ಕೊಡಗು ಜಿಲ್ಲೆ ಭಾಗಮಂಡಲ, ಕುಶಾಲನಗರ ಕಣಿವೆ ಸೇರಿ ಹಲವು ಕಡೆ ಕಾವೇರಿ ನದಿಗೆ ಆರತಿ ಬೆಳಗುವ ಕಾರ್ಯಕ್ರಮದೊಂದಿಗೆ ಸಾರ್ವಜನಿಕರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನದಿ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.ನವೆಂಬರ್ 18ರಂದು ತಮಿಳುನಾಡಿನ ಕಾವೇರಿ ಬಂಗಾಲಕೊಲ್ಲಿ ಸಮುದ್ರ ಸಂಗಮದಲ್ಲಿ ವಿಶೇಷ ಕಾರ್ಯಕ್ರಮದೊಂದಿಗೆ ಕಾವೇರಿ ಪವಿತ್ರ ತೀರ್ಥ ವಿಸರ್ಜನೆ ಸಮಾರಂಭ ನಡೆಯುವುದು ಎಂದು ಹೇಳಿದರು.
ಸದ್ಯದಲ್ಲೇ ತಮ್ಮ ಸಮಿತಿಯ ಪ್ರಮುಖರ ನಿಯೋಗ ಕ್ಷೇತ್ರ ಶಾಸಕರ ಮೂಲಕ ಮುಖ್ಯಮಂತ್ರಿಗಳ ಬಳಿ ತೆರಳಿ ಕಾವೇರಿ ನದಿ ಸಂರಕ್ಷಣೆಗಾಗಿ ಯೋಜನೆ ರೂಪಿಸಲು ಮನವಿ ಸಲ್ಲಿಸಲಾಗುವುದೆಂದು ಚಂದ್ರಮೋಹನ್ ತಿಳಿಸಿದರು.16ನೇ ಕಾವೇರಿ ನದಿ ಜಾಗೃತಿ ಯಾತ್ರೆ ಸಂದರ್ಭ ರಾಮನಾಥಪುರದಲ್ಲಿ 156 ನೇ ಹುಣ್ಣಿಮೆ ತಿಂಗಳ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಳಭೋಯಿ, ಖಜಾಂಚಿ ರಘು, ಸಂಘಟನಾ ಕಾರ್ಯದರ್ಶಿ ಶಿವಪ್ಪ, ತಾಲೂಕು ಅಧ್ಯಕ್ಷ ಸಿದ್ದರಾಜು, ಖಜಾಂಚಿ ಕೇಶವ ಮನವಿ ಮಾಡಿದರು.