ವಾಲ್ಮೀಕಿ ನಿಗಮ ಅವ್ಯವಹಾರ ಸಿಬಿಐ ತನಿಖೆ ನಡೆಸಬೇಕು: ಗುಮ್ಮನೂರು ಮಲ್ಲಿಕಾರ್ಜುನ

| Published : Jun 01 2024, 12:45 AM IST

ವಾಲ್ಮೀಕಿ ನಿಗಮ ಅವ್ಯವಹಾರ ಸಿಬಿಐ ತನಿಖೆ ನಡೆಸಬೇಕು: ಗುಮ್ಮನೂರು ಮಲ್ಲಿಕಾರ್ಜುನ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187.33 ಕೋಟಿ ಅ‍ವ್ಯವಹಾರ ಪ್ರಕರಣ‍ವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ, ನಿಗಮ ಅಧ್ಯಕ್ಷ ನಾಗೇಂದ್ರ ಅವರ ರಾಜಿನಾಮೆ ಪಡೆಯಬೇಕು. ಅಲ್ಲದೇ, ಇಡೀ ಪ್ರಕರಣ ಸಿಬಿಐ ತನಿಖೆ ನಡೆಸಬೇಕು ಎಂದು ನಾಯಕ ಸಮಾಜದ ಹಿರಿಯ ಮುಖಂಡ, ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

- ನಿಗಮ ಅಧ್ಯಕ್ಷರು ರಾಜಿನಾಮೆ ನೀಡುವಂತೆ ಒತ್ತಾಯ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ರಾಜ್ಯದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187.33 ಕೋಟಿ ಅ‍ವ್ಯವಹಾರ ಪ್ರಕರಣ‍ವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ, ನಿಗಮ ಅಧ್ಯಕ್ಷ ನಾಗೇಂದ್ರ ಅವರ ರಾಜಿನಾಮೆ ಪಡೆಯಬೇಕು. ಅಲ್ಲದೇ, ಇಡೀ ಪ್ರಕರಣ ಸಿಬಿಐ ತನಿಖೆ ನಡೆಸಬೇಕು ಎಂದು ನಾಯಕ ಸಮಾಜದ ಹಿರಿಯ ಮುಖಂಡ, ವಕೀಲ ಗುಮ್ಮನೂರು ಕೆ.ಎಂ.ಮಲ್ಲಿಕಾರ್ಜುನ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ₹187.33 ಕೋಟಿ ಅವ್ಯವಹಾರದಿಂದ ರೋಸಿ ಹೋದ ನಿಗಮದ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿ ಡೆತ್‌ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಲಘುವಾಗಿ ಪರಿಗಣಿಸಬಾರದು ಎಂದರು.

ನಿಗಮ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ, ಸಂಬಂಧಿಸಿದ ಅಧಿಕಾರಿಗಳೆಲ್ಲರನ್ನೂ ತನಿಖೆಗೊಳಪಡಿಸಬೇಕು. ನಿಷ್ಪಕ್ಷಪಾತ ತನಿಖೆ ಮಾಡಿ, ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು. ಭ್ರಷ್ಟರಿಗೆ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಬೇಕು. ಅಷ್ಟೂ ಹಣವನ್ನು ವಸೂಲು ಮಾಡಬೇಕು ಎಂದ ಅವರು, ಯೋಜನೆಗಳ ಅನುದಾನ ದುರುಪಯೋಗ ಸಹಿಸಲು ಸಾಧ್ಯವಿಲ್ಲ ಎಂದರು.

ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ನಾಯಕ ಸಮಾಜದ ಜನಪ್ರತಿನಿಧಿಗಳು ಸಹ ಪ್ರಕರಣ ಬಗ್ಗೆ ಚಕಾರ ಎತ್ತಿಲ್ಲ. ಸ್ವತಃ ಸ್ವಾಮೀಜಿಯವರೇ ಪರಿಶಿಷ್ಟ ಪಂಗಡದ ಫಲಾನುಭವಿಗಳ ಪಟ್ಟಿ ತಯಾರಿಸಿ, ನಿಗಮಕ್ಕೆ ಕಳಿಸುತ್ತಾರೆ, ಫಲಾನುಭವ ಪಡೆಯುತ್ತಾರೆ. ನಿಜವಾದ ಫಲಾನುಭವಿಗಳು ವಂಚಿತರಾಗುತ್ತಾರೆ. ಹೀಗಾದರೆ ಅಭಿವೃದ್ಧಿಯಾದರೂ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

- - - -31ಕೆಡಿವಿಜಿ1:

ಕೆ.ಎಂ.ಮಲ್ಲಿಕಾರ್ಜುನಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.