ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಾಲೆಗೆ ಶೇ.100 ಫಲಿತಾಂಶ ಬಂದಿದೆ.ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಒಡೆತನದ ಶಾಲೆಯ ಎಲ್ಲಾ 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ಧಾರಿಣಿ ಎ.ಜೆ (ಶೇ.96.4) ಅಂಕಗಳಿಸಿ ಕಾಲೇಜಿಗೆ ಪ್ರಥಮ, ಚಿನ್ಮಯ್ ವೈ.(ಶೇ.92.), ದ್ವಿತೀಯ ಹಾಗೂ ನಿಸರ್ಗ ಕೆ.ಎಸ್.(ಶೇ.91.40) ತೃತೀಯ ಸ್ಥಾನಗಳಿಸಿದ್ದಾರೆ.ಧಾರಿಣಿ.ಎ.ಜೆ ಹಾಗೂ ಚಿನ್ಮಯ್.ವೈ. ಅವರು ಕನ್ನಡ ವಿಷಯದಲ್ಲಿ 100 ಅಂಕ ಗಳಿಸಿದ್ದಾರೆ. ಶಾಲೆಯ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 20 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಉತ್ತಮ ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿರುವ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸಂಸ್ಥೆ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಹಾಗೂ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು ಅವರು ಹಾಗೂ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.ಸಂಸ್ಥೆಯ ಸಿ.ಪಿ.ಶಿವರಾಜು ಮಾತನಾಡಿ, ಎಸ್‌ಟಿಜಿ ಶಿಕ್ಷಣ ಸಂಸ್ಥೆಯೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು, ನಗರ ಪ್ರದೇಶದ ಮಕ್ಕಳಿಗೆ ಸರಿಸಮಾನವಾಗಿ ವಿದ್ಯಾಭ್ಯಾಸ ಕಲಿಯಬೇಕೆಂಬ ಉದ್ದೇಶ ಆರಂಭಿಸಿದ್ದೇವೆ. ಅದೇರೀತಿ ಶಾಲೆಯಲ್ಲಿ ನುರಿತ ಶಿಕ್ಷಕರು, ಉಪನ್ಯಾಸಕ ತಂಡದ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದಲೇ ಶಾಲೆಗೆ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗೆ ಅಭಿನಂದಿಸುವುದಾಗಿ ತಿಳಿಸಿದರು.