ಸಾರಾಂಶ
ನಯಾಜ್ ಬಹುತೇಕ ಫೈನಲ್ । ಅಲ್ಪಸಂಖ್ಯಾತರ ರೇಸ್‌ನಲ್ಲಿ ಮನ್ಸೂರ್, ನಿಸಾರ್ ಅಹಮದ್, ಸಿ.ಎನ್. ಅಕ್ಮಲ್,
ಆರ್. ತಾರಾನಾಥ್ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಸಿಡಿಎ)ದ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲದ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ನೇಮಕದ ಪ್ರಕ್ರಿಯೆ ಬಹುತೇಕ ಫೈನಲ್ ಆಗಿದೆ.ಮೊದಲ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ, ಎರಡನೇ ಅವಧಿಯಲ್ಲಿ ದಲಿತರಿಗೆ ಅಥವಾ ಬೇರೆ ಸಮುದಾಯಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಅಲ್ಪಸಂಖ್ಯಾತರ ಪಟ್ಟಿಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ನಯಾಜ್ ಅಹಮದ್, ಆಡಿಟರ್ ಮನ್ಸೂರ್, ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನಿಸಾರ್ ಅಹಮದ್, ಕಿಸಾನ್ ಸೆಲ್ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷ ಸಿ.ಎನ್. ಅಕ್ಮಲ್ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು.
ಈ ಬಾರಿ ದಲಿತರಿಗೆ ಸಿಡಿಎ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಒತ್ತಡವೂ ಕೂಡ ಇದೆ. ದಲಿತರಲ್ಲಿ ಹಿರೇಮಗಳೂರು ರಾಮ ಚಂದ್ರ, ಮಲ್ಲೇಶ್‌ಸ್ವಾಮಿ, ಜಗದೀಶ್ ಅವರು ಪ್ರಯತ್ನದಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ಚಿಕ್ಕ ಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಯಾಜ್ ಫೈನಲ್:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಮೊದಲ ಅವಧಿಯಲ್ಲಿ ಹನೀಫ್ ಅವರನ್ನು ಸಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಎರಡನೇ ಅವಧಿಯಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಚಂದ್ರೇಗೌಡರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲಾಗಿತ್ತು. ಈ ಬಾರಿಯೂ ಅಲ್ಪಸಂಖ್ಯಾತರಿಗೆ ಮೊದಲ ಅವಧಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲು ಉದ್ದೇಶಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರುವ ನಾಲ್ವರಲ್ಲಿ ನಯಾಜ್ ಅಹಮದ್ ಹೆಸರು ಮುಂಚೂಣಿಯಲ್ಲಿದ್ದು, ಅವರ ಹೆಸರು ಬಹುತೇಕ ಫೈನಲ್ ಆಗಿದೆ. ಸರ್ಕಾರದಿಂದ ಆದೇಶ ಆಗಬೇಕಾಗಿದೆ ಎಂದು ಬಲ್ಲ ಮೂಲಗಳು ಕನ್ನಡಪ್ರಭಕ್ಕೆ ತಿಳಿಸಿವೆ.ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದರು. ಹಾಗಾಗಿ ಮೊದಲ ಅವಧಿ ಅ ಸಮುದಾಯಕ್ಕೆ ನೀಡುವುದು ಸಾಮಾಜಿಕ ನ್ಯಾಯ ಎಂಬುದು ಪಕ್ಷದ ಮುಖಂಡರ ವಾದ. ದಲಿತರನ್ನು ಕೂಡ ಬಿಡುವಂತಿಲ್ಲ ಅವರಿಗೂ ಸಹ ಮುಂದಿನ ದಿನಗಳಲ್ಲಿ ಅವಕಾಶ ನೀಡುವ ಬಗ್ಗೆ ಯೋಚಿಸಲಾಗಿದೆ.ಕೈ ತಪ್ಪುವ ಸಾಧ್ಯತೆ
ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡರಿಗೆ ಸಿಡಿಎ ಅಧ್ಯಕ್ಷ ಸ್ಥಾನ ಸಿಗಬಹುದೆಂಬ ಲೆಕ್ಕಾಚಾರ ಪಕ್ಷದಲ್ಲಿ ಮಾತ್ರವಲ್ಲ ಸಾರ್ವಜನಿಕ ವಲಯದಲ್ಲೂ ಕೇಳಿ ಬಂದಿತ್ತು. ಆದರೆ, ಈ ಲೆಕ್ಕಾಚಾರ ತಲೆ ಕೆಳಗಾಗುವ ಸಾಧ್ಯತೆ ಇದೆ.ಇದಕ್ಕೆ ಕಾರಣ, ಜಿಲ್ಲೆಯಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಇಬ್ಬರು ಶಾಸಕರು ಇದ್ದಾರೆ. ಎ.ಎನ್.ಮಹೇಶ್ ಅವರಿಗೆ ನಿಗಮದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮಂಜೇಗೌಡ ಸಹ ಕುರುಬ ಸಮಾಜದವರು. ಅವರನ್ನು ಅಧ್ಯಕ್ಷರನ್ನಾಗಿ ಮಾಡಿ ದರೆ ಮತ್ತೆ ಕುರುಬ ಸಮಾಜಕ್ಕೆ ಆದ್ಯತೆ ನೀಡಿದಂತಾಗುತ್ತದೆ. ಇನ್ನುಳಿದ ಸಮುದಾಯವನ್ನು ಕಡೆಗಣಿಸಲಾಗಿದೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಾಗುತ್ತಿದೆ ಎಂಬ ಮಾತುಗಳು ಪಕ್ಷದಲ್ಲಿ ಕೇಳಿ ಬರುತ್ತಿದೆ.--- ಬಾಕ್ಸ್ ----ಪಕ್ಷದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಹಾಗಾಗಿ ಸಿಡಿಎ ಅಧ್ಯಕ್ಷ ಸ್ಥಾನವನ್ನು ಪಕ್ಷ ನೀಡುತ್ತದೆ ಎಂಬ ವಿಶ್ವಾಸ ಇದೆ. ಹಲವು ಮಂದಿ ಆಕಾಂಕ್ಷಿಗಳು ಇದ್ದಾರೆ. ಪಕ್ಷ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ನೋಡಬೇಕಾಗಿದೆ.
- ನಯಾಜ್ ಅಹಮದ್ಜಿಲ್ಲಾಧ್ಯಕ್ಷರು, ಅಲ್ಪಸಂಖ್ಯಾತರ ಘಟಕ
ಜಿಲ್ಲಾ ಕಾಂಗ್ರೆಸ್ ಸಮಿತಿಪೋಟೋ ಫೈಲ್ ನೇಮ್ 9 ಕೆಸಿಕೆಎಂ 5
-------------------------------------------------------------------