ಸಾರಾಂಶ
ಮಧ್ಯಾಹ್ನ 12.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಕಚೇರಿಯಲ್ಲಿ ಸ್ವಯಂಸೇವಕರ ಸಭೆ ನಡೆಯಲಿದೆ. ಈ ಸಭೆಗೆ ಹೆಗ್ಗಡೆ ದಂಪತಿ, ಕಾರ್ಯನಿರ್ವಾಹಕ ನಿರ್ದೇಶಕರು, ಮುಖ್ಯ ನಿರ್ವಹಣಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ನದಿ ತೀರ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸ ಕಡ್ಡಿಗಳನ್ನು ಸ್ವಚ್ಛ ಮಾಡುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಮೇ 22ರಂದು ಬುಧವಾರ ಹಮ್ಮಿಕೊಳ್ಳಲಾಗಿದೆ.ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30ರ ತನಕ ಶ್ರಮದಾನ ನಡೆಯಲಿದೆ. ಈ ಶ್ರಮದಾನ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವಿ. ಹೆಗ್ಗಡೆ ಆಗಮಿಸಿ ಸೇವಾರ್ಥಿಗಳಿಗೆ ಪ್ರೇರಣೆ ನೀಡಲಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ, ಗುರುವಾಯನಕೆರೆ ಮತ್ತು ಬೆಳ್ತಂಗಡಿ ವ್ಯಾಪ್ತಿಯ 200ಕ್ಕೂ ಮಿಕ್ಕಿದ ಸ್ವಯಂಸೇವಕರು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ರಂಗಶಿವ ಕಲಾ ತಂಡ, ಧರ್ಮಸ್ಥಳ ದೇವಳ ಸಿಬ್ಬಂದಿ, ಪ್ರಗತಿಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಕಚೇರಿಯ ಹಾಗೂ ಬೆಳ್ತಂಗಡಿ ಗುರುವಾಯನಕೆರೆ ಯೋಜನಾ ಕಚೇರಿಯ ಸಿಬ್ಬಂದಿ, ಗ್ರಾಮಸ್ಥರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಜವಾಬ್ದಾರಿಯನ್ನು ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಸ್ ನಿರ್ವಹಿಸುವರು.ಮಧ್ಯಾಹ್ನ 12.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಕಚೇರಿಯಲ್ಲಿ ಸ್ವಯಂಸೇವಕರ ಸಭೆ ನಡೆಯಲಿದೆ. ಈ ಸಭೆಗೆ ಹೆಗ್ಗಡೆ ದಂಪತಿ, ಕಾರ್ಯನಿರ್ವಾಹಕ ನಿರ್ದೇಶಕರು, ಮುಖ್ಯ ನಿರ್ವಹಣಾಧಿಕಾರಿಗಳು ಭಾಗವಹಿಸಲಿದ್ದಾರೆ.