ಸಾರಾಂಶ
ಮೈಸೂರು ದಸರಾ ಮಾದರಿಯಲ್ಲಿ ಸಿಂಧನೂರು ತಾಲೂಕಿನಲ್ಲಿ 9 ದಿನಗಳ ಕಾಲ ದಸರಾ ಮಹೋತ್ಸವ ಆಚರಣೆಗೆ ಶಾಸಕ ಹಂಪನಗೌಡ ಬಾದರ್ಲಿ ಮುಂದಾಗಿರುವುದು ಒಳ್ಳೆಯದು
ಕನ್ನಡಪ್ರಭ ವಾರ್ತೆ ಸಿಂಧನೂರು
ಮೈಸೂರು ದಸರಾ ಮಾದರಿಯಲ್ಲಿ ಸಿಂಧನೂರು ತಾಲೂಕಿನಲ್ಲಿ 9 ದಿನಗಳ ಕಾಲ ದಸರಾ ಮಹೋತ್ಸವ ಆಚರಣೆಗೆ ಶಾಸಕ ಹಂಪನಗೌಡ ಬಾದರ್ಲಿ ಮುಂದಾಗಿರುವುದು ಒಳ್ಳೆಯದು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹೇಳಿದರು.ನಗರದ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ದಸರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಲೋಕಸಭೆ ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಎಲ್ಲ ಧರ್ಮ, ಸಮುದಾಯಗಳ, ಜಾತಿ, ಜನಾಂಗಗಳ ಆಚರಣೆಗಳಿಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದಿಂದ ಗೌರವ ನೀಡಲಾಗುತ್ತಿದೆ. ಆದರೆ ಬಿಜೆಪಿ ಮತ್ತು ಆರ್‌ಎಸ್ಎಸ್ ಅನ್ಯಧರ್ಮಗಳ ಬಗ್ಗೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು. .
ಜಿಪಂ ಮಾಜಿ ಸದಸ್ಯರಾದ ಬಸವರಾಜ ಹಿರೇಗೌಡರ್, ಅಸ್ಲಾಂಪಾಷಾ, ಮುಖಂಡ ಲಿಂಗರಾಜ ಪಾಟೀಲ್ ಹಂಚಿನಾಳ ಮಾತನಾಡಿದರು. ಇದೇ ಸಂದರ್ಭದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಶ್ರೇಣಿಕರಾಜ್ ಶೇಠ್, ಪಂಪನಗೌಡ ತಾವರಗೇರಾ, ಎನ್.ಅಮರೇಶ, ರಾಮನಗೌಡ ಬಸಾಪುರ, ದ್ರಾಕ್ಷಾಯಿನಿ, ಬಸಮ್ಮ, ಲಲಿತಾ, ಖಾಜಿಮಲಿಕ್ ಇದ್ದರು. ಅನಿಲಕುಮಾರ ನಿರೂಪಿಸಿದರು.