ಸಾರಾಂಶ
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಬಕ್ರೀದ್ ಹಬ್ಬ ಆಚರಿಸಬೇಕೆಂದು ಸಿಪಿಐ ಅಡೇಪ್ಪ ಬನ್ನಿ ಹೇಳಿದರು.
ಕನ್ನಡಪ್ರಭ ವಾರ್ತೆ ಕಮಲನಗರ
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಬಕ್ರೀದ್ ಹಬ್ಬ ಆಚರಿಸಬೇಕೆಂದು ಸಿಪಿಐ ಅಡೇಪ್ಪ ಬನ್ನಿ ಹೇಳಿದರು.ಕಮಲನಗರ ಪಟ್ಟಣದಲ್ಲಿ ಭಾನುವಾರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ಪಟ್ಟಣದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬ ಆಚರಿಸಬೇಕೆಂದರು.
ಪಿಎಸ್ಐ ಚಂದ್ರಶೇಖರ್ ನಿರ್ಣೆ ಮಾತನಾಡಿ, ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ ಮಾಡಿದರೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಗೋವುಗಳ ಹತ್ಯೆ, ಅಕ್ರಮ ಸಾಗಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕೆಂದು ಸೂಚಿಸಿದರು.ಗ್ರಾಮ ಪಂಚಾಯತ್ ಸದಸ್ಯ ಬಾಲಾಜಿ ತೆಲಂಗ, ಡಿಎಸ್ಎಸ್ ತಾಲೂಕು ಅಧ್ಯಕ್ಷ ಗೋವಿಂದ್ ರಾವ್ ತಾಂದಳೆ, ಮಹೇಶ್ ಸಜ್ಜನ್ ಶೆಟ್ಟಿ, ನಾಜಿಮ್ ಬಾಗವಾನ್, ಗ್ರಾ.ಪಂ ಸದಸ್ಯ ರಾಜಕುಮಾರ್ ಗಾಯಕವಾಡ್, ಸಾಯಿನಾಥ್ ಕಾಂಬಳೆ, ಸುಭಾಷ್ ಮಿರ್ಚೆ, ಶಬ್ಬಿರ್ ಖುರೇಷಿ, ಅಮುಲ್ ಸೂರ್ಯವಂಶಿ, ಶಾಲಿವನ್ ಡೊಂಗ್ರೆ ಮತ್ತಿತರರು ಹಾಜರಿದ್ದರು.--
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))