ಪರಿಸರಸ್ನೇಹಿ ದೀಪಾವಳಿ ಹಬ್ಬ ಆಚರಿಸಿ: ಡಿಸಿ ಮನವಿ

| Published : Oct 19 2025, 01:00 AM IST

ಪರಿಸರಸ್ನೇಹಿ ದೀಪಾವಳಿ ಹಬ್ಬ ಆಚರಿಸಿ: ಡಿಸಿ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ದೀಪಾವಳಿ ಹಬ್ಬವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 20ರಂದು ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯುಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯ ಹದಗೆಡಿಸುತ್ತಿದೆ. ಆದ್ದರಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಮುಖ್ಯ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

- 125 ಡೆಸಿಬಲ್ ಶಬ್ದಕ್ಕಿಂತ ಮೇಲ್ಪಟ್ಟ ಪಟಾಕಿ ನಿಷೇಧ । ಹಸಿರು ಪಟಾಕಿ ಮಾತ್ರ ಸಿಡಿಸಲು ಸುಪ್ರೀಂ ಕೋರ್ಟ್‌ ಆದೇಶ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ದೀಪಾವಳಿ ಹಬ್ಬವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 20ರಂದು ಸಡಗರದಿಂದ ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯುಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯ ಹದಗೆಡಿಸುತ್ತಿದೆ. ಆದ್ದರಿಂದ ಪರಿಸರಸ್ನೇಹಿ ದೀಪಾವಳಿ ಆಚರಣೆಗೆ ಮುಖ್ಯ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಹೆಚ್ಚು ಸದ್ದು ಹಾಗೂ ರಾಸಾಯನಿಕ ಹೊಗೆಯುಕ್ತ ಪಟಾಕಿಗಳನ್ನು ಸಿಡಿಸುವುದರಿಂದ ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟಾಗುತ್ತದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸರಳ ರೀತಿಯಲ್ಲಿ ಹಾಗೂ ಮಾಲಿನ್ಯ ರಹಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸಲು ಆದ್ಯತೆ ನೀಡಿ ಎಂದು ತಿಳಿಸಿ, ಕೆಲವು ಮುನ್ನೆಚ್ಚರಿಕೆ ಸೂಚನೆಗಳನ್ನೂ ನೀಡಿದ್ದಾರೆ.

ಹಸಿರು ಪಟಾಕಿ ಗುರುತಿಸುವುದು ಹೇಗೆ?:

1. ಪಟಾಕಿ ಬಾಕ್ಸ್‌ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ಮತ್ತು ನ್ಯಾಷನಲ್ ಎನ್ವಿರಾನ್‌ಮೆಂಟಲ್ ಎಂಜಿನಿಯರಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಇಇಆರ್‌ಐ) ಲೋಗೋ ಹಾಗೂ ನೋಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು.

2. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು.

3. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು.

4. ಹಣತೆ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಅಪಾರ್ಟ್ಮೆಂಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ.

5. ದೀಪಾವಳಿ ಆಚರಣೆಯಲ್ಲಿ ಬೆಳಕೇ ಪ್ರಧಾನವಾಗಿರಲಿ. ಗಿಡ, ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿ ಆಗದಂತೆ ಎಚ್ಚರವಹಿಸಿ.

6. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವ ಹಸಿರು ಪಟಾಕಿಗಳ ಲೇಬಲ್‌ಗಳನ್ನು ಪರಿಶೀಲಿಸಿ ಖರೀದಿಸಬೇಕು.

7) 125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ಧಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

8. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನತ್ಯಾಜ್ಯ ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡಬೇಕು

9. ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪಿನ ನಿರ್ದೇಶನದಂತೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಗಳನ್ನು ಸಿಡಿಸುವಂತಿಲ್ಲ.

10. ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಸ್ಫೋಟಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟ ನಿಷೇಧಿಸಲಾಗಿದೆ.

- - -

-ಫೋಟೋ: ಪಟಾಕಿಗಳು.

-16ಕೆಡಿವಿಜಿ32: ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾಧಿಕಾರಿ.