ಸಾರಾಂಶ
Celebrate Human Chain Program Meaningfully: Darshanpur
- ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
-----------ಕನ್ನಡಪ್ರಭ ವಾರ್ತೆ ಯಾದಗಿರಿ
ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಕಾರ್ಯಕ್ರಮ ಕುರಿತು, ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸೆ.15 ರಂದು ಯರಗೋಳದಿಂದ ಗೂಗಲ್ ಬ್ರಿಡ್ಜವರೆಗೆ ಬರುವಂತಹ ಗ್ರಾಮಸ್ಥರು, ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳವರು, ಅಧಿಕಾರಿ, ಸಿಬ್ಬಂದಿ ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಪಿಡಿಒ, ನರೇಗಾ, ಗ್ರಾ.ಪಂ ಅಧಿಕಾರಿ ಸಿಬ್ಬಂದಿ ಅವಶ್ಯಕ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಡಾ. ಸುಶೀಲಾ ಮಾತನಾಡಿ, ರಾಜ್ಯ ಸರ್ಕಾರದ ನಿರ್ದೇಶನದಂತೆ ಬೀದರದಿಂದ ಚಾಮರಾಜನಗರವರೆಗೆ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ. ಸೆ.15 ರಂದು ಜಿಲ್ಲೆಯ ಯಾದಗಿರಿಯಿಂದ ಗೂಗಲ್ ಬ್ರಿಡ್ಜ್‌ವರೆಗೆ ವಿವಿಧ ಥೀಮ್ ಒಳಗೊಂಡ ಮಾನವ ಸರಪಳಿ ಹಾಗೂ ಯಾದಗಿರಿ, ಜಿಲ್ಲಾಡಳಿತ ಭವನ ಆವರಣದಲ್ಲಿ ಹಾಗೂ ವಡಗೇರಾ ತಾಲೂಕು ಕೇಂದ್ರದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಇದೆ. 46000 ಜನ ಸಾರ್ವಜನಿಕರು, ವಿದ್ಯಾರ್ಥಿಗಳು 60 ಕಿ.ಮೀ ವ್ಯಾಪ್ತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಜಿ.ಪಂ ಸಿಇಒ ಲವೀಶ್ ಒರಡಿಯಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತರು ಹಂಪಣ್ಣ ಸಜ್ಜನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.--
10ವೈಡಿಆರ್2: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಕಾರ್ಯಕ್ರಮ ಏರ್ಪಡಿಸುವ ಕುರಿತು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.