ಅಂಬೇಡ್ಕರ್‌ ಭಾವಚಿತ್ರ ಇಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿ: ಶಾಸಕ ಬಾಲಕೃಷ್ಣ

| Published : Jan 20 2024, 02:06 AM IST

ಅಂಬೇಡ್ಕರ್‌ ಭಾವಚಿತ್ರ ಇಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿ: ಶಾಸಕ ಬಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಗಣರಾಜ್ಯೋತ್ಸವ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದ್ದಾರೆ.

ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಬೇಕು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಪಾಲನೆ ಮಾಡದ ಅಧಿಕಾರಿಗಳಿಗೆ ಮತ್ತು ಶಾಲಾ ಕಾಲೇಜುಗಳ ಮೇಲೆ ಶಿಸ್ತು ಕ್ರಮವನ್ನು ಜರುಗಿಸಲು ಮುಂದಾಗುತ್ತೇವೆ. ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಈ ಬಾರಿ ಎಲ್ಲಾ ತಾಲೂಕು ಅಧಿಕಾರಿಗಳಿಗೂ ಕೂಡ ಹಾಜರಾತಿ ಪುಸ್ತಕಕ್ಕೆ ಸಹಿ ಮಾಡುವುದು ಕಡ್ಡಾಯವಾಗಿದೆ. ಕಾರ್ಯಕ್ರಮಕ್ಕೆ ಗೈರು ಹಾಜರಾದ ಸಿಬ್ಬಂದಿಗೆ ಮತ್ತು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಗಮನ ತಂದು ಅಂಥವರ ಮೇಲೆ ಶಿಸ್ತು ಕ್ರಮದಲ್ಲಿ ಮುಂದಾಗುತ್ತೇವೆ. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದಂತಹ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಲಾಗುವುದು. ಮಾಧ್ಯಮಿಕ ಶಾಲಾ ಆವರಣದಿಂದ ತಾಲೂಕು ಕ್ರೀಡಾಂಗಣಕ್ಕೆ ವಿದ್ಯಾರ್ಥಿಗಳು ಬರಲು ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಸೂಚಿಸಿದರು.

ಸಭೆಯಲ್ಲಿ ಡಿವೈಎಸ್ಪಿ ರವಿಪ್ರಸಾದ್, ವೃತ್ತ ನಿರೀಕ್ಷಕ ವಸಂತ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ಪುರಸಭೆಯ ಮುಖ್ಯ ಅಧಿಕಾರಿ ಹೇಮಂತ್ ಕುಮಾರ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಶಾಸಕ ಬಾಲಕೃಷ್ಣ ಮಾತನಾಡಿದರು.