ಸವಿತಾ ಮಹರ್ಷಿ ಸೇವಾಲಾಲ್ ಜಯಂತಿ ಆಚರಿಸಿ: ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ

| Published : Feb 03 2024, 01:46 AM IST

ಸವಿತಾ ಮಹರ್ಷಿ ಸೇವಾಲಾಲ್ ಜಯಂತಿ ಆಚರಿಸಿ: ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರ ನಿಗದಿಪಡಿಸಿದಂತೆ ಫೆ.16ರಂದು ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿನಿಲಯಗಳಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.

ಕೊಪ್ಪಳ: ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಫೆ.16ರಂದು ಆಚರಿಸಲಾಗುವ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಲು ಕ್ರಮ ವಹಿಸಬೇಕು ಎಂದು ಎಸಿ ಕ್ಯಾ.ಮಹೇಶ್ ಮಾಲಗಿತ್ತಿ ಹೇಳಿದರು.

ನಗರದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ನಿಗದಿಪಡಿಸಿದಂತೆ ಫೆ.16ರಂದು ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿನಿಲಯಗಳಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದ ಬಂಧುಗಳು ಅನುಕೂಲ ಮಾಡಿಕೊಡಬೇಕು. ಹಾಗೆಯೇ ಜಯಂತಿ ಆಚರಣೆಗೆ ಸಂಬಂಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.

ಫೆ.16ರಂದು ಬೆಳಿಗ್ಗೆ 8.30ಕ್ಕೆ ನಗರದ ಅಕ್ಕಮಹಾದೇವಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ, ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನ ತಲುಪುತ್ತದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಒದಗಿಸಬೇಕು. ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಶೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಸುಗಮ ಸಂಗೀತಕ್ಕೆ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಸಮಾಜದ ಬೇಡಿಕೆ ಹಾಗೂ ಅವರ ಸಲಹೆಯಂತೆ ಅವರು ಸೂಚಿಸಿದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವ ಕಾರಣ ಯಾವುದೇ ರೀತಿಯ ಅನನುಕೂಲವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.ಸಂತ ಸೇವಾಲಾಲ್ ಜಯಂತಿ:ಫೆ.15ರಂದು ಆಚರಿಸಲಾಗುವ ಸಂತ ಸೇವಾಲಾಲ್ ಜಯಂತಿ ಆಚರಣೆ ಕುರಿತು ಸಮಾಜದ ಮುಖಂಡರು ಸಹಾಯಕ ಆಯುಕ್ತರೊಂದಿಗೆ ಚರ್ಚಿಸಿದರು. ಅಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂತ ಸೇವಾಲಾಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಲು ಸಮಾಜದ ಮುಖಂಡರು ಸೂಚಿಸಿದ ಹಿನ್ನೆಲೆಯಲ್ಲಿ ಅಂದು ಸಂತ ಸೇವಾಲಾಲ್ ಜಯಂತಿ ಆಚರಿಸಲು ನಿರ್ಧರಿಸಲಾಯಿತು.ಸಭೆಯಲ್ಲಿ ಕನ್ನಡ-ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸವಿತಾ ಸಮಾಜದ ಮುಖಂಡರಾದ ರವಿಕುಮಾರ ಸೂಗೂರ, ಮಾರುತಿ ಸೂಗೂರ, ಯಲ್ಲಪ್ಪ ಸವಿತಾ, ಶಿವಮೂರ್ತಿ ಸವಿತಾ, ದೇವಪ್ಪ, ವೆಂಕಟೇ, ಸಂತ ಸೇವಾಲಾಲ್ ಸಮಾಜದ ಧರ್ಮಗುರು ಗುರುಗೋಸಾಯಿ ಬಾವಾ, ಮುಖಂಡರಾದ ಭರತ ನಾಯ್ಕ, ಹನಮಮತಪ್ಪ ಮಡ್ಡಿ, ಯಮನೂರಪ್ಪ ಬಿ. ಉಪಸ್ಥಿತರಿದ್ದರು.