ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರಮಹನೀಯರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ತತ್ವ ಮತ್ತು ಆರ್ದಶಗಳನ್ನು ಪಾಲಿಸಿ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು. ಪಟ್ಟಣದ ತಾಲೂಕು ಕಚೇರಿಯ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ನಡೆದ ಮಡಿವಾಳ ಮಾಚೀದೇವ, ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾ ಯೋಗಿ ವೇಮನ ಮತ್ತು ಅಂಬಿಕರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹನೀಯರ ಸಂದೇಶ ಆದರ್ಶ ಮತ್ತು ತತ್ವಗಳ ಸಾರವನ್ನು ಅರಿತು ಜೀವನದಲ್ಲಿ ಪರಿವರ್ತನೆ ಮಾಡಿಕೊಂಡು ಇತರರಿಗೂ ಅವುಗಳ ಮೌಲ್ಯದ ಬಗ್ಗೆ ತಿಳಿಸಬೇಕೆಂದು ಸಲಹೆ ನೀಡಿದರು. ಪುರಸಭೆ ಅಧ್ಯಕ್ಷ ಶಿವುನಾಯಕ್, ಮಡಿವಾಳ ಸಮಾಜದ ಬೋರಶೆಟ್ಟಿ, ಸಿದ್ದನಕೊಪ್ಪಲು ಕುಮಾರ್, ಬೆಸ್ತ ಸಮಾಜದ ಮುಖಂಡ ಆರ್ಮುಗಂ, ತಹಸೀಲ್ದಾರ್ ಜಿ. ಸುರೇಂದ್ರಮೂರ್ತಿ ಮಾತನಾಡಿದರು. ಮುಖಂಡರಾದ ಎಸ್. ಮಹದೇವ್, ರಾಮಯ್ಯ, ಕೃಷ್ಣಯ್ಯ, ಆರೋಗ್ಯಾಧಿಕಾರಿ ಡಾ.ಡಿ. ನಟರಾಜು, ಪುರಸಭೆ ಮುಖ್ಯಾಧಿಕಾರಿ ಬಿ.ವಿ. ವೆಂಕಟೇಶ್, ಸಿಡಿಪಿಒ ಸಿ.ಎಂ. ಅಣ್ಣಯ್ಯ, ತಾಲೂಕು ಕುರುಬರ ಸಂಘದ ನಿರ್ದೇಶಕರಾದ ರಾಮಕೃಷ್ಣೇಗೌಡ, ಕೆ.ಎಚ್. ಬುಡೀಗೌಡ ಇದ್ದರು.