ಸಾರಾಂಶ
ಹೊಸಪೇಟೆ: ವಿಜಯನಗರ ಜಿಲ್ಲಾದ್ಯಂತ ಶುಕ್ರವಾರ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿಗಳು, ಬ್ಯಾಂಕ್, ಖಾಸಗಿ ಸಂಸ್ಥೆಗಳ ಕಚೇರಿ, ಶಾಲಾ- ಕಾಲೇಜುಗಳಲ್ಲಿ ಆಚರಣೆ ಮಾಡಲಾಯಿತು.
ಕಾಂಗ್ರೆಸ್‌ನಿಂದ ಆಚರಣೆ: ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಜಿಲ್ಲಾ ಕಚೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವದ ನಿಮಿತ್ತ ಜಿಲ್ಲಾಧ್ಯಕ್ಷ ಸಿರಾಜ್ ಶೇಕ್ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸಂವಿಧಾನ ಎಲ್ಲ ಸಮುದಾಯದವರಿಗೆ ಸಮಾನ ಅವಕಾಶಗಳನ್ನು ನೀಡಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ವಲ್ಲಭಭಾಯ್ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್ , ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಹಲವಾರು ಮುಖಂಡರ ತ್ಯಾಗ ಬಲಿದಾನದಿಂದ ಎಲ್ಲರಿಗೂ ಸ್ವಾಂತಂತ್ರ್ಯ ದೊರಕಿದೆ ಎಂದರು.
ಜಿಲ್ಲಾ ಕಾರ್ಯದರ್ಶಿ ಕೊಟಗಿನಾಳ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಿನಾಯಕ ಶೆಟ್ಟರ್, ಸಿ. ಖಾಜಾ ಹುಸೇನ್, ಜಿಲ್ಲಾ ಸೇವಾದಳದ ಜಿಲ್ಲಾ ಸಂಘಟಕ ಬಿ. ಮಾರೆಣ್ಣ ಅವರ ನೇತೃತ್ವದಲ್ಲಿ ಜರುಗಿತು.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ ಯಾದವ್, ಕೆಪಿಸಿಸಿ ಪದವೀಧರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ವೀರಾಂಜನೇಯ, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸೋಮಪ್ಪ, ಜಿಲ್ಲಾ ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ಡಿ. ವೆಂಕಟರಮಣ, ಜಿಲ್ಲಾ ಸೇವಾದಳ ಜಿಲ್ಲಾಧ್ಯಕ್ಷೆ ಅಮೀನಮ್ಮ, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಣ್ಣದಮನೆ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಜಿ. ತಮನಳೇಪ್ಪ, ಪದವೀಧರ ಶಿಕ್ಷಕರ ವಿಭಾಗದ ಜಿಲ್ಲಾಧ್ಯಕ್ಷ ಸಣ್ಣ ಈರಪ್ಪ, ಜಿಲ್ಲಾ ಕಾರ್ಯದರ್ಶಿ ಸಂಗಪ್ಪ, ಸದ್ದಾಂ ಹುಸೇನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರಡಿ ಮಂಜುನಾಥ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೀರಭದ್ರ ನಾಯಕ ಮತ್ತಿತರರಿದ್ದರು.
ಬಿಜೆಪಿಯಿಂದ ಆಚರಣೆ: ಹೊಸಪೇಟೆ ನಗರದ ಬಿಜೆಪಿ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಯುವ ನಾಯಕ ಸಿದ್ದಾರ್ಥ ಸಿಂಗ್, ಮಂಡಲ ಅಧ್ಯಕ್ಷ ಕಸಾಟಿ ಉಮಾಪತಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿರಣ್, ಶಂಕ್ರಿ, ಮಂಡಳ ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಬಿ. ಜೀವರತ್ನಂ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಪೂಜಾರ್, ಹೊನ್ನೂರಪ್ಪ ಮತ್ತಿತರರಿದ್ದರು.ಪಿಡಿಐಟಿ ಕಾಲೇಜಿನಲ್ಲಿ ಗಣರಾಜ್ಯೋತ್ಸವ: ನಗರದ ಪಿಡಿಐಟಿ ಕಾಲೇಜಿನಲ್ಲಿ ಜಿಲ್ಲಾ ಮೂರನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ್ ಎ. ನಂದಗಡಿ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣವನ್ನು ನೆರೆವೇರಿಸಿ ಮಾತನಾಡಿದ ಅವರು, ನಮ್ಮ ಸ್ವಾತಂತ್ರ‍್ಯ ನೇತಾರರ ಆಶಯದಂತೆ ಸಮಾನತೆ, ಸಾಮಾಜಿಕ ನ್ಯಾಯ, ಬಡತನ ನಿವಾರಣೆ, ಗ್ರಾಮೀಣಾಭಿವೃದ್ಧಿ, ಮಹಿಳಾ ಕಲ್ಯಾಣ ಮುಂತಾದ ಪ್ರಗತಿಪರ ಕಾರ್ಯಗಳಲ್ಲಿ ಯುವಕರು ಕೈಜೋಡಿಸಿದರೆ ದೇಶವು ಹೆಚ್ಚಿನ ಅಭಿವೃದ್ಧಿ ಕಾಣುವುದರಲ್ಲಿ ಸಂದೇಹವಿಲ್ಲ ಎಂದರು.ಪಿಡಿಐಟಿಯ ಆಡಳಿತ ಮಂಡಳಿ ಅಧ್ಯಕ್ಷ ಪಲ್ಲೇದ್ ದೊಡ್ಡಪ್ಪ ಕಾರ್ಯಕ್ರಮ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಯು.ಎಂ. ರೋಹಿತ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಕೆ. ಪ್ರಹ್ಲಾದ್, ಹಿರಿಯ ವಕೀಲ ಅಬ್ದುಲ್ ಲತೀಫ್, ಡಾ. ಬಾಲಾಜಿ, ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಎಚ್. ಶರಣಸ್ವಾಮಿ, ಎಂ.ಬಿ.ಎ. ವಿಭಾಗದ ಮುಖ್ಯಸ್ಥರಾದ ಪ್ರೊ. ರವಿಕುಮಾರ ಎಸ್.ಪಿ. ಸ್ವಾಗತಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಕೆ.ಎಸ್.ಮಂಜುನಾಥ, ಪ್ರೊ.ಮಧ್ವರಾಜ ಮತ್ತಿತರರಿದ್ದರು.ವಿವಿಧೆಡೆ ಗಣರಾಜ್ಯೋತ್ಸವ: ನಗರದ ನಗರದ ನಗರಸಭೆ, ಫ್ರೀಡಂ ಪಾರ್ಕ್, ಬುಡ್ಗ ಜಂಗಮ್ ಕಾಲನಿ, ವಿಕಾಸ ಬ್ಯಾಂಕ್, ವಿಜಯನಗರ ಕಾಲೇಜು, ಕೇಂದ್ರೀಯ ವಿದ್ಯಾಲಯ ಸೇರಿದಂತೆ ವಿವಿಧ ಶಾಲಾ- ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.