ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ ಇವರ ಸಯುಕ್ತ ಆಶ್ರಯದಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕೆವಿಜಿ ತಾಂತ್ರಿಕ ಕಾಲೇಜು ಭಾಗಮಂಡಲದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಕೆವಿಜಿ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಶ್ರೀಕಾಂತ್ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿದರು.ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. .ರಮೇಶ್ ಮುಖ್ಯ ಭಾಷಣಕಾರರಾಗಿ ಮಾತನಾಡಿ, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ತುಂಬಿರುವ ಶುಭ ಸಂದರ್ಭದಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮಾಚರಣೆಯನ್ನು ವರ್ಷಪೂರ್ತಿ ನಡೆಸಲಾಗುತ್ತಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿಯೂ ಎಲ್ಲ ಹಳ್ಳಿ ಹಳ್ಳಿಗಳಲ್ಲಿರುವ ಶಾಲೆಗಳಲ್ಲಿ ಅರ್ಥಪೂರ್ಣವಾಗಿ ಸುವರ್ಣ ಸಂಭ್ರಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ನಾವು ಕನ್ನಡವನ್ನು ಉಳಿಸಿಕೊಳ್ಳಬೇಕಾದರೆ ಮೊದಲಿಗೆ ವ್ಯವಹಾರಿಕವಾಗಿ ಕೂಡ ಕನ್ನಡವನ್ನೇ ಬಳಸಬೇಕು ಎಂದು ಕಿವಿಮಾತು ಹೇಳಿದರು.
ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮದ್ ಮಾತನಾಡಿ, ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳ ಶಿಸ್ತು ಪ್ರದರ್ಶನ ಮತ್ತು ಕಾರ್ಯಕ್ರಮ ನೀಡಿದ ಬಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿರಮೇಶ್ ಮಾತನಾಡಿ ಇತರ ಭಾಷೆಗಳು ಅವಧಿಗೆ ಸೀಮಿತವಾಗಿರಲಿ ಕನ್ನಡ ಭಾಷೆ ಹೆಚ್ಚಾಗಿ ಬಳಕೆಯಾಗಲಿ
ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರುಡಾ. ಅಂಬೇಡ್ಕರ್ . ವಸತಿ ಶಾಲೆಯ ಪ್ರಾಂಶುಪಾಲೆ ನೀತಾ ಕೆ.ಡಿ. ಮಾತನಾಡಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿ ಕುರಿತ ಸಮೂಹ ಗೀತ ಗಾಯನ ಹಾಗೂ ಸಮೂಹ ನೃತ್ಯ ಪ್ರದರ್ಶನ ಮೂಡಿಬಂದವು. ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜೆ. ದಿವಾಕರ ಮುಖ್ಯ ಅತಿಥಿಯಾಗಿದ್ದರು. ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕೋಶಾಧಿಕಾರಿ ಸಂಪತ್
ಕುಮಾರ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಿಶಿತ್ ಮಾದಯ್ಯ ಸಂಘಟನಾಕಾರ್ಯದರ್ಶಿಗಳಾದ ತಳೂರು ದಿನೇಶ್ ಕರುಂಬಯ್ಯ , ಚೊಕ್ಕಾಡಿ ಪ್ರೇಮ ರಾಘವಯ್ಯ ಕೆವಿಜಿ ತಾಂತ್ರಿಕ ಕಾಲೇಜಿನ
ಉಪನ್ಯಾಸಕರು ಕಾವೇರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಕುಂಚಡ್ಕ ಕಸ್ತೂರಿ, ಅಂಬೇಡ್ಕರ್ ವಸತಿಶಾಲೆಯ ಶಿಕ್ಷಕ ವೃಂದ ಭಾಗಮಂಡಲ ಹೋಬಳಿಯ ಪರಿಷತ್ ಪದಾಧಿಕಾರಿಗಳು ಸೇರಿದಂತೆ ಕನ್ನಡ ಅಭಿಮಾನಿಗಳು ಭಾಗವಹಿಸಿದ್ದರು. ಶಾಲೆಯ ಕನ್ನಡ ಶಿಕ್ಷಕಿ ರೂಪ ನಿರೂಪಿಸಿದರು. ಶ್ಯಾಮಿಲಿ ಬಿ.ಬಿ. ಸ್ವಾಗತಿಸಿದರು. ವಿದ್ಯಾ
ಭಾರದ್ವಾಜ್ ವಂದಿಸಿದರು.