ಕರ್ನಾಟಕದ 50 ವರ್ಷದ ಸಂಭ್ರಮ ಶ್ಲಾಘನೀಯ

| Published : Aug 26 2024, 01:34 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಹನೂರುನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯ ಏಕೀಕರಣವಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ತಿಳಿಸಿದರು.

ತಹಸೀಲ್ದಾರ್ ಗುರುಪ್ರಸಾದ್ ಹೇಳಿಕೆ । ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಚಾಲನೆಕನ್ನಡಪ್ರಭ ವಾರ್ತೆ ಹನೂರು

ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯ ಏಕೀಕರಣವಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ ಎಂದು ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ತಿಳಿಸಿದರು.

ತಾಲೂಕು ಆಡಳಿತ, ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಹನೂರು ಪಟ್ಟಣದಲ್ಲಿ ಕನ್ನಡ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಜ್ಯೋತಿ ರಥಯಾತ್ರೆ ವೈಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ರಾಜ್ಯ ಏಕೀಕರಣವಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಕನ್ನಡ ಸಂಭ್ರಮ ಐವತ್ತು ಎಂಬ ಕಾರ್ಯಕ್ರಮವನ್ನು ಸರ್ಕಾರ ವಿಶೇಷವಾಗಿ ಆಯೋಜನೆ ಮಾಡಿದೆ. ರಾಜ್ಯದ ಗಡಿ ಹನೂರು ತಾಲೂಕಿನಲ್ಲಿ ಎಲ್ಲಾ ಭಾಷೆಯ ಜನರಿದ್ದರೂ ಸಹ ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿಯೊಬ್ಬರು ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಅಭಿಮಾನ ಇಟ್ಟುಕೊಳ್ಳಬೇಕು. ಗಡಿ ತಾಲೂಕಿನಲ್ಲಿ ತಮಿಳು ಹಾಗೂ ಕನ್ನಡ ಭಾಷಿಕರು ಇದ್ದರೂ ಕನ್ನಡಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಇದುವರೆಗೂ ಎಲ್ಲರೂ ಪ್ರೀತಿ ವಿಶ್ವಾಸ ಸಹೋದರತ್ವದಿಂದ ಜೀವನ ನಡೆಸುತ್ತಿದ್ದಾರೆ. ನಮ್ಮ ಕನ್ನಡ ಭಾಷೆ, ಸಂಸ್ಕೃತಿಯ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು ಎಂದು ಹೇಳಿದರು.

ಕರ್ನಾಟಕ ಜ್ಯೋತಿ ರಥಯಾತ್ರೆಯು ಬೀದರ್‌ನಿಂದ ಗಡಿ ಜಿಲ್ಲೆ ಚಾಮರಾಜನಗರದ ವರೆಗೂ ಸಂಚರಿಸಲಿದೆ. ಜಿಲ್ಲೆಯ ಗಡಿ ತಾಲೂಕಾದ ಹನೂರು ವ್ಯಾಪ್ತಿಯಲ್ಲಿ ಎರಡು ದಿನ ಸಂಚರಿಸಲಿದ್ದು ಎರಡು ಗ್ರಾಮ ಪಂಚಾಯಿತಿ ಸೇರಿದಂತೆ ಹನೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ರಥಯಾತ್ರೆಗೆ ಕನ್ನಡಪರ ಸಂಘಟನೆಗಳು, ರೈತ ಸಂಘದವರು, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಕಾರ್ಯ ನಿರ್ವಹಿತ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಯಶಸ್ವಿ ಮಾಡಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಮಾತನಾಡಿ, 1973 ಮೈಸೂರು ರಾಜ್ಯ ಎಂಬ ಹೆಸರನ್ನು ಮುಖ್ಯಮಂತ್ರಿಗಳಾಗಿದ್ದ ದಿ ದೇವರಾಜ ಅರಸುರವರು ಬದಲಾಯಿಸಿ ನವೆಂಬರ್ ಒಂದರಂದು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದರು. ಅಂದಿನಿಂದ ಕರ್ನಾಟಕ ರಾಜ್ಯವೆಂದು ರೂಢಿಗೆ ಬಂದಿದೆ. ಈ ಹಿನ್ನೆಲೆ ಚರಿತ್ರೆ ಹಾಗೂ ಸಾಂಸ್ಕೃತಿಕ ಹಿನ್ನೆಲೆ ನೆಲ, ಜಲ, ಭಾಷೆಯ ಪ್ರೀತಿಯ ಅರಿವು ಮೂಡಿಸಲು 2023ರ ನ.2 ರಂದು ಹಂಪಿಯಿಂದ ಪ್ರಾರಂಭವಾಗಿ ಗದುಗಿನ ಶ್ರೀ ವೀರನಾರಾಯಣ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮ, ಹೋಬಳಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ರಥಯಾತ್ರೆಯು ಸಂಚರಿಸುತ್ತಿದೆ. ಇಂದು ನಮ್ಮ ಗಡಿ ತಾಲೂಕಿಗೆ ರಥಯಾತ್ರೆಯೂ ಆಗಮಿಸಿರುವುದು ಹೆಮ್ಮೆಯ ವಿಚಾರ. ಈ ನಿಟ್ಟಿನಲ್ಲಿ ಎರಡು ದಿನ ವಿಜೃಂಭಣೆಯಿಂದ ಮೆರವಣಿಗೆ ನಡೆಸುತ್ತೇವೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ತಹಸೀಲ್ದಾರ್ ಗುರುಪ್ರಸಾದ್‌, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಶಿಕ್ಷಕರು, ವಿದ್ಯಾರ್ಥಿಗಳು ಮಂಗಳವಾದ್ಯದ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.

ಶಿರಸ್ತೇದಾರ್ ನಾಗೇಂದ್ರ, ಕಂದಾಯ ನಿರೀಕ್ಷಕರಾದ ಶೇಷಣ್ಣ, ಮಹದೇವಸ್ವಾಮಿ, ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಶಿಕ್ಷಣ ಸಂಯೋಜಕ ಕಂದವೇಲು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್, ಕಸಾಪ ಕಾರ್ಯದರ್ಶಿ ಅಭಿಲಾಶ್, ವಿಜಯ್ ಕನ್ನಡಪರ ಹೋರಾಟಗಾರ ವಿನೋದ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿ ರಾಹೀಲ್, ರೈತ ಮುಖಂಡರಾದ ಮಾದಪ್ಪ, ಶಶಿ, ಮಹಾದೇವ, ರುದ್ರಸ್ವಾಮಿ, ಕೆಂಪರಾಜು, ಸೋಮಣ್ಣ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ಅಭಿಮಾನಿಗಳು ಹಾಜರಿದ್ದರು. 25ಸಿಎಚ್ಎನ್‌11 ಮತ್ತು12

ಹನೂರಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಯಿತು.