ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ರಾಯಚೂರು ಮತ್ತು ಸರ್ಕಾರಿ ಪ್ರೌಢಶಾಲೆ ಯರಮರಸ್ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಯ ಕುರಿತು ಯರಮರಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರಾಯಚೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ರಾಯಚೂರು ಮತ್ತು ಸರ್ಕಾರಿ ಪ್ರೌಢಶಾಲೆ ಯರಮರಸ್ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಯ ಕುರಿತು ಯರಮರಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಪರಿಸರ ಅಧಿಕಾರಿ ಗಿರೀಶ್ ಮಾತನಾಡಿ, ಈ ವರ್ಷ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸು ವುದರೊಂದಿಗೆ ಜಲಮೂಲಗಳಾದ ನದಿ, ಕೆರೆ ಹಾಗೂ ಬಾವಿಗಳನ್ನು ಸಂರಕ್ಷಿಸುವ ಪ್ರಯತ್ನಕ್ಕೆ ಎಲ್ಲರೈ ಕೈ ಜೋಡಿಸಬೇಕು. ಈ ಹಿನ್ನೆಲೆಯಲ್ಲಿ ನೈಸರ್ಗಿಕ ಬಣ್ಣಗಳಿಂದ ಸಿದ್ಧಪಡಿಸಿದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಬೇಕು ಎಂದು ಮನವಿ ಮಾಡಿದರು. ಶಾಲೆಯ ಮುಖ್ಯೋಪಾಧ್ಯಯ ಕೃಷ್ಣ ಮತಾನಾಡಿ, ಗಣೇಶ ಹಬ್ಬದಲ್ಲಿ ಮಣ್ಣಿನ ಮೂರ್ತಿಯನ್ನು ಪೂಜಿಸಿ, ಪ್ಲಾಸ್ಟಿಕ್ ಹಾರ, ಪ್ಲಾಸ್ಟಿಕ್ ಹೂ, ಕ್ಯಾರಿ ಬ್ಯಾಗ್‌ಗಳನ್ನು ಬಳಸಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ಸಹ ಶಿಕ್ಷಕರಾದ ಸುವರ್ಣ, ಪ್ರವೀಣ್, ವೈಜ್ಞಾನಿಕ ಸಹಾಯಕ ಮಲ್ಲಿಕಾರ್ಜುನ, ಕ್ಷೇತ್ರ ಸಹಾಯಕರು ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
