ಸಾರಾಂಶ
ಕನ್ನಡಪ್ರಭ ವಾರ್ತೆ, ಚನ್ನಗಿರಿ
ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪದವೀಧರ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಆಭ್ಯರ್ಥಿಯಾಗಿದ್ದ ಎಸ್.ಎಲ್.ಭೋಜೇಗೌಡ ಇವರು ಗೆಲುವು ಸಾಧಿಸುತ್ತಿದ್ದಂತೆಯೇ ಚನ್ನಗಿರಿ ತಾಲೂಕು ಮಲಹಾಳ್ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಿಜೆಪಿ ಪಕ್ಷದ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡ ಮಲಹಾಳ್ ಕುಮಾರ್ ಮಾತನಾಡಿ ಸಂಘಟಿತವಾದ ಪಕ್ಷದ ಕಾರ್ಯಕ್ರಮಗಳಾಗಿರುವ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದಲ್ಲಿ ಬುದ್ಧಿವಂತ ಮತದಾರರುಗಳೇ ಇದ್ದು ಯಾವುದೇ ಆಸೆ-ಅಮೀಷಗಳಿಗೆ ಬಲಿಯಾಗದೆ ತಮ್ಮ ಮತಗಳನ್ನು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ನೀಡಿದ್ದು ಬಿಜೆಪಿ ಪಕ್ಷದ ಸಂಘಟನೆಯನ್ನು ತೋರುತ್ತದೆ ಎಂದು ಹೇಳುತ್ತಾ ಈ ಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳು ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ಕುರಿತಂತೆ ಸರ್ಕಾರದ ಗಮನಕ್ಕೆ ತಂದು ಅವರ ಕಷ್ಟಗಳಿಗೆ ಸ್ಫಂದಿಸುವ ಕೆಲಸ ಮಾಡಿ ಪಕ್ಷದ ಹೆಸರನ್ನು ಬೆಳಗಿಸಲಿ ಎಂದರು.ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೇಸ್ ಪಕ್ಷ ರಾಜ್ಯದ ಜನತೆಗೆ ಪೊಳ್ಳು ಭರವಸೆಗಳನ್ನು ನೀಡುತ್ತಾ ಜನತೆಯ ದಿಕ್ಕುತಪ್ಪಿಸುತ್ತಿದ್ದು ಕಳೆದ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿಯಿಂದ ರಾಜ್ಯದಲ್ಲಿ 19 ಸ್ಥಾನಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿದ್ದು, ರಾಜ್ಯದ ಜನತೆ ಕಾಂಗ್ರೇಸ್ ಪಕ್ಷದ ದುರಾಡಳಿತಕ್ಕೆ ತಕ್ಕ ಉತ್ತರವನ್ನು ನೀಡಿದ್ದಾರೆ ಎಂದರು.ಈ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ಮಲಹಾಳ್ ರಂಗಸ್ವಾಮಿ, ಸುರೇಶ್, ಮಂಜುನಾಥ್, ದಿನೇಶ್, ತಿಪ್ಪೇಶ್, ರಘು, ಸುನೀಲ್, ಶಶಿಕುಮಾರ್ ಸೇರಿದಂತೆ ಮೊದಲಾದವರು ಹಾಜರಿದ್ದರು.
ನಿಟುವಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರದ ನಿಟುವಳ್ಳಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್.ನಾಗಭೂಷಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಇತರರ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಲಾಯಿತು.ನಗರ ನಿಟುವಳ್ಳಿಯ ಶ್ರೀರಾಮ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು 25 ವರ್ಷಗಳ ನಂತರ ತಮ್ಮ ಪಕ್ಷಕ್ಕೆ ಕ್ಷೇತ್ರವನ್ನು ಗೆದ್ದು ಕೊಟ್ಟ ಡಾ.ಪ್ರಭಾ ಮಲ್ಲಿಕಾರ್ಜುನ ಪರ ಜಯಕಾರ ಹಾಕಿದರು.
ಇದೇ ವೇಳೆ ಮಾತನಾಡಿದ ಆರ್.ಎಚ್.ನಾಗಭೂಷಣ, ದಾವಣಗೆರೆ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬೇರು ಮಟ್ಟದಿಂದ ಕಟ್ಟಬೇಕಾಗಿದೆ. ನಮ್ಮೆಲ್ಲಾ ಹಿರಿಯ, ಕಿರಿಯ ಮುಖಂಡರು, ಮಹಿಳೆಯರು, ಕಾರ್ಯಕರ್ತರು ಸೇರಿ, ಪಕ್ಷವನ್ನು ಮತ್ತೆ ಕಟ್ಟುವ ಮೂಲಕ ಉತ್ತರದಲ್ಲಿ ಮತ್ತಷ್ಟು ಪಕ್ಷವನ್ನು ಸದೃಢಗೊಳಿಸೋಣ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಮಾತನಾಡಿ, ಇಡೀ ನಗರವನ್ನು ರಾಜ್ಯದಲ್ಲೇ ಅತ್ಯುತ್ತಮ ನಗರವಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಭಿವೃದ್ಧಿಪಡಿಸಿ ದ್ದಾರೆ. ಹೀಗಿದ್ದರೂ ಉತ್ತರದಲ್ಲಿ ಒಂದಿಷ್ಟು ಹಿನ್ನಡೆಯಾಗಿದೆ.ಕಾಂಗ್ರೆಸ್ ಹಿನ್ನಡೆಗೆ ಕಾರಣವೇನೆಂಬುದನ್ನು ಮುಂದಿನ ದಿನಗಳಲ್ಲಿ, ಗುರುತಿಸಿ, ಸರಿಪಡಿಸೋಣ ಎಂದು ತಿಳಿಸಿದರು.ಮಾಜಿ ಉಪ ಮೇಯರ್ ಎಚ್.ಮಂಜಮ್ಮ, ಪಾಲಿಕೆ ಮಾಜಿ ಸದಸ್ಯರಾದ ರೇಣುಕಮ್ಮ ಶಾಂತರಾಜ, ಟಿ.ಡಿ.ಹಾಲೇಶ, ಡಿ.ಎಸ್.ಕೆ.ಪರಶುರಾಮ, ನಿಟುವಳ್ಳಿ ಎಸ್.ಪ್ರವೀಣ ಕುಮಾರ, ಆನಗೋಡು ನಾಗರಾಜ, ಎಚ್.ಎಂ.ಅರುಣ, ಬಾಲರಾಜ, ಚಂದ್ರಮ್ಮ, ಸಾವಿತ್ರಮ್ಮ, ರತ್ನಮ್ಮ, ನೇತ್ರಮ್ಮ, ಪ್ರತಾಪ ಇತರರು ಇದ್ದರು.