ಗದಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

| Published : Jun 05 2024, 12:30 AM IST

ಗದಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಮೊತ್ತಮ್ಮೆ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆ ಮಾಡುವತ್ತ ದಾಪುಗಾಲು

ಕನ್ನಡಪ್ರಭ ವಾರ್ತೆ ಗದಗ

ಹಾವೇರಿ-ಗದಗ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹಾಗೂ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗದಗ ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ನೂರಾರು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ದೇಶದಲ್ಲಿ ಮೊತ್ತಮ್ಮೆ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆ ಮಾಡುವತ್ತ ದಾಪುಗಾಲುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಕೆಲಸ ಮಾಡುತ್ತಿಲ್ಲ ಎನ್ನುವುದು ರಾಜ್ಯದ ಫಲಿತಾಂಶ ನೋಡಿದಾಗ ಸ್ಪಷ್ಟವಾಗುತ್ತದೆ. ಬದಲಾಗಿ ಮತದಾರರು ಗ್ಯಾರಂಟಿ ಯೋಜನೆಯಿಂದ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಉತ್ತಮ ಸ್ಥಾನ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಹೆಸರು ಹೇಳಿಕೊಂಡು ಗೆದ್ದಿತ್ತು. ಅದನ್ನು ದೇಶದಲ್ಲಿ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಹೀಗಾಗಿ ದೇಶದಲ್ಲಿ ಮೋದಿ ಅಲೆ ಹೆಚ್ಚಾಗಿದೆ. ಹೀಗಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಬಂದಿದೆ ಎಂದು ಕಾರ್ಯಕರ್ತರು ಅಭಿಪ್ರಾಯ ಹಂಚಿಕೊಂಡರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ ರಟ್ಟಿಹಳ್ಳಿ, ಲಿಂಗರಾಜ ಪಾಟೀಲ, ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ಕೆ.ಕೆ. ಮಳಗೌಡ್ರ, ಜಗನ್ನಾಥಸಾ ಭಾಂಡಗೆ, ಬಿ.ಎಚ್. ಲದ್ವಾ, ತೊಟೊಸಾ ಭಾಂಡಗೆ, ಪ್ರಕಾಶ ಬಾಕಳೆ, ಶಶಿಧರ ದಿಂಡೂರ, ಡಿ.ಬಿ. ಕರೀಗೌಡ್ರ, ನಿರ್ಮಲಾ ಕೊಳ್ಳಿ, ಸ್ವಾತಿ ಅಕ್ಕಿ, ಕವಿತಾ ಬಂಗಾರಿ, ಜಯಶ್ರೀ ಉಗಲಾಟದ, ರೇಖಾ ಬಂಗಾರಶೆಟ್ಟರ, ಚನ್ನಮ್ಮ ಹುಳಕಣ್ಣವರ, ಕಸ್ತೂರಿ ಕಮ್ಮಾರ, ಕಮಲಾಕ್ಷಿ ಗೊಂದಿ, ರೇಖಾ ಬೆಟಗೇರಿ, ರತ್ನಾ ಕುರಗೋಡ, ಉಮೇಶ ಹಡಪದ, ಮಂಜುನಾಥ ಶಾಂತಗೇರಿ, ಮಾಂತಾಶ ಬಾತಾಖಾನಿ, ಗೋರಪ್ಪಜ್ಜ, ಹನುಮಂತ ದಿಂಡೆಣ್ಣವರ, ಕುಮಾರ ಮಾರನಬಸರಿ, ಸಿರಾಜ ಲಕ್ಕುಂಡಿ, ನಿಸಾರ ನಮಾಜಿ, ವಿನೋದ ಹಂಸನೂರ ಇದ್ದರು.

ಪರಸ್ಪರ ಬಣ್ಣ ಎರಚಿಕೊಂಡ ಮಹಿಳೆಯರು: ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಮಹಿಳಾ ಬಿಜೆಪಿ ಮುಖಂಡರು ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ಅದರಲ್ಲಿಯೂ ಗದಗ ಕ್ಷೇತ್ರದಲ್ಲಿ ಬಿಜೆಪಿ ಹೆಚ್ಚಿನ ಮತ ಪಡೆದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ ಇತರರನ್ನು ಹೆಗಲ ಮೇಲೆ ಹೊತ್ತು ಕುಣಿದು ಸಂಭ್ರಮಿಸಿದರು.