ಸಾರಾಂಶ
ಆಲಮೇಲ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆಯ ಸಂಭ್ರಮಾಚರಣೆಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮಲ್ಲಿಬೊಮ್ಮ ಮಹಾಸ್ವಾಮಿಗಳು.
ಕನ್ನಡಪ್ರಭ ವಾರ್ತೆ ಆಲಮೇಲ
ವಿಶ್ವಗುರು ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ರಾಜ್ಯದ ಹಲವಾರು ಶರಣ ಸಂತರನ್ನು ಒಂದುಗೂಡಿಸಿ ಸಮಾನತೆಗಾಗಿ ತಮ್ಮ ಚಿಂತನೆಗಳನ್ನು ಬಿತ್ತರಿಸಿದ್ದು ಹೆಮ್ಮೆಯ ವಿಚಾರ ಎಂದು ಇಲ್ಲಿನ ಶ್ರೀಗಳಾದ ಮಲ್ಲಿಬೊಮ್ಮ ಮಹಾಸ್ವಾಮಿಗಳು ನುಡಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆಯ ಸಂಭ್ರಮಾಚರಣೆಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.
ವಾದ್ಯ ವೈಭವದಿಂದ ಬಸವ, ಬಸವ ಎಂಬ ಘೋಷಣೆಯೊಂದಿಗೆ ಅರ್ಜುಣಗಿ ಮಠದ ಸಂಗನಬಸವ ಶ್ರೀಗಳು ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಸಂಭ್ರಮಿಸಿದರು.ಬಳಿಕ ನಾಗರೀಕ ವೇದಿಕೆಯ ಅಧ್ಯಕ್ಷ ರಮೇಶ್ ಭಂಟನೂರವರು ಬಸವಣ್ಣನವರ ಅನುಯಾಯಿಗಳೊಂದಿಗೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಇಡಿ ಜಗತ್ತಿಗೆ ಅನುಭವ ಮಂಟಪದ ಮೂಲಕ ಸಾಂಸ್ಕೃತಿಕ, ಸಾಮಾಜಿಕ ಹಾಗೂ ರಾಜಕೀಯ ಚಿಂತನೆಗಳಿಗೆ ಸಮಾನತೆಗೆ ಹೊಸ ದಿಕ್ಕನ್ನು ತೋರಿಸಿದ ವಚನ ಚಳುವಳಿಯ ನಾಯಕತ್ವವನ್ನು ವಹಿಸಿದ ಬಸವಣ್ಣನವರನ್ನು ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ಮಂಡಿಸಿ ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಸಾಹಿತಿ ಸಿದ್ದಾರಾಮ ಉಪ್ಪಿನ, ಬಿ.ಟಿ.ಪಾಟೀಲ, ಅಶೋಕ ಕೊಳಾರಿ, ನಾನಾಗೌಡ ಪಾಟೀಲ, ಜೈ ಭೀಮ್ ನಾಯ್ಕೊಡಿ, ಯಲ್ಲಪ್ಪ ದುರುಡ, ಅಬ್ದುಲ್ ವಹಾಬ್ ಸುಂಬುಡ, ಬಸವ ಅನುಯಾಯಿಗಳು ಇದ್ದರು.