ಗುಡಿಬಂಡೆ: ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ದೇವರ ದಾಸಿಮಯ್ಯನವರ ಜಯಂತಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಯಂತಿಯ ಅಂಗವಾಗಿ ದಾಸಿಮಯ್ಯನವರ ಭಾವಚಿತ್ರವುಳ್ಳ ಬೆಳ್ಳಿ ರಥದ ಮೆರವಣಿಗೆ ನಡೆಸಲಾಯಿತು.
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಕುಮಾರಿ ಮಾತನಾಡಿ, ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕನ್ನು ತಿದ್ದಿದ ಮಹಾನ್ ಮಾನವತಾವಾದಿಯಾಗಿದ್ದು, ಪ್ರತಿಯೊಬ್ಬರೂ ಅವರ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ನಂತರ ಮಾತನಾಡಿದ ಸಮುದಾಯದ ಮುಖಂಡ ಜಿ.ಎಸ್. ನಾಗರಾಜು ಅವರು, ದೇವರ ದಾಸಿಮಯ್ಯನವರು ಸಾಮಾಜಿಕ ಕಳಕಳಿಯುಳ್ಳ ಶ್ರೇಷ್ಠ ವ್ಯಕ್ತಿಯಾಗಿದ್ದರು. ನೇಕಾರರು ಶ್ರಮಜೀವಿಗಳಾಗಿದ್ದು, ಇಂದಿನ ಒತ್ತಡದ ಬದುಕಿನಲ್ಲಿ ಮಾನಸಿಕ ಸುಸ್ಥಿತಿ ಕಾಯ್ದುಕೊಳ್ಳಲು ಶರಣರ ತತ್ವ ಸಂದೇಶಗಳು ದಾರಿದೀಪವಾಗಿವೆ ಎಂದರು.
ಈ ಸಂದರ್ಭದಲ್ಲಿ ತಾಪಂ ಇಓ ನಾಗಮಣಿ, ಗ್ರೇಡ್ -2 ತಹಸೀಲ್ದಾರ್ ತುಳಸಿ, ಸಮಾಜ ಕಲ್ಯಾಣಾಧಿಕಾರಿ ಲಕ್ಷ್ಮಿಪತಿರೆಡ್ಡಿ, ಕೃಷಿ ಇಲಾಖೆಯ ಕೇಶವರೆಡ್ಡಿ, ಪಪಂ ಮುಖ್ಯಾಧಿಕಾರಿ ಆರತಿ, ಸರ್ಕಾರಿ ನೌಕರರ ಸಂಘದ ಮುನಿಕೃಷ್ಣ ಉಪಸ್ಥಿತರಿದ್ದರು.23ಜಿಯುಡಿ1: ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ದೇವರ ದಾಸಿಮಯ್ಯನವರ ಜಯಂತಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.