ಗ್ರಾಮೀಣ ಭಾಗದಲ್ಲಿ ರೈತರು ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಿನ್ನೆಲೆಯಲ್ಲಿ ತಮ್ಮ ಜಾನುವಾರುಗಳನ್ನು ಶುಚಿಗೊಳಿಸುವ ಮೂಲಕ ವರ್ಷ ವಿಡಿದುಡಿದ ಜಾನುವಾರುಗಳಿಗೆ ವಿಶೇಷ ಪುಷ್ಪಾಲಂಕಾರ ದೊಂದಿಗೆ ಶೃಂಗರಿಸಿ ಯಾವುದೇ ರೋಗ ರುಜಿನಗಳು ಬಾರದಿರಲಿ ಎಂದು ಪೂಜೆ ಸಲ್ಲಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ವರ್ಷದ ಮೊದಲ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ತಾಲೂಕಿನಾದ್ಯಂತ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಮುಂಜಾನೆ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ, ಕೋಟೆ ಬೀದಿ ಶ್ರೀಉಗ್ರ ನರಸಿಂಹ ಸ್ವಾಮಿ, ಕಾಶಿ ವಿಶ್ವೇಶ್ವರಸ್ವಾಮಿ, ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ಹಾಗೂ ಚಿಕ್ಕ ಅಂಕನಹಳ್ಳಿಯ ನಂದಿ ಬಸವೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಅಭಿಷೇಕದೊಂದಿಗೆ ಪುಷ್ಪಲಂಕಾರ ಸೇವೆ ನೆರವೇರಿಸಿ ವಿಶೇಷ ಪೂಜಾ ಕಾರ್ಯಗಳು ನೆರವೇರಿತು.

ಗ್ರಾಮೀಣ ಭಾಗದಲ್ಲಿ ರೈತರು ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಿನ್ನೆಲೆಯಲ್ಲಿ ತಮ್ಮ ಜಾನುವಾರುಗಳನ್ನು ಶುಚಿಗೊಳಿಸುವ ಮೂಲಕ ವರ್ಷ ವಿಡಿದುಡಿದ ಜಾನುವಾರುಗಳಿಗೆ ವಿಶೇಷ ಪುಷ್ಪಾಲಂಕಾರ ದೊಂದಿಗೆ ಶೃಂಗರಿಸಿ ಯಾವುದೇ ರೋಗ ರುಜಿನಗಳು ಬಾರದಿರಲಿ ಎಂದು ಪೂಜೆ ಸಲ್ಲಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದರು.

ವರ್ಷವಿಡಿ ತಾವು ಬೆಳೆದ ದವಸ ಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸಿ ಭಕ್ತಿ ಭಾವ ಮೆರೆದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಹಿಳೆಯರು ಮತ್ತು ಮಕ್ಕಳು ಹೊಸ ಬಟ್ಟೆಗಳನ್ನು ತೊಟ್ಟು ಮನೆ ಮನೆಗೆ ತೆರಳಿ ಎಳ್ಳು ಬೆಲ್ಲ ವಿನಿಮಯ ಮಾಡಿಕೊಂಡರು.ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿ ಸಂಭ್ರಮ

ಪಾಂಡವಪುರ:

ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ರೈತರು ತಮ್ಮ ಜಾನುವಾರುಗಳನ್ನು ಬಗೆಬಗೆಯ ಹೂವು, ಬಣ್ಣಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದರು.

ಹೆಣ್ಣು ಮಕ್ಕಳು ಹೊಸ ಉಡುಗೆ ತೊಟ್ಟು ಎಳ್ಳುಬೆಲ್ಲ ಹಂಚುವ ಮೂಲಕ ಹಬ್ಬ ಆಚರಿಸಿದರು. ಹಬ್ಬದ ಅಂಗವಾಗಿ ರೈತರು ಬೆಳಗ್ಗೆಯಿಂದಲೇ ಜಾನುವಾರುಗಳನ್ನು ಸ್ವಚ್ಚಗೊಳಿಸಿ ಬಣ್ಣ ಹಾಕಿ ಹೂವುಗಳಿಂದ ಅಲಂಕಾರಗೊಳಿಸಿದರು.

ನಂತರ ಗ್ರಾಮದ ಹೊರವಲಯದಲ್ಲಿ ಹಿಂದೂ ಸಂಪ್ರದಾಯದಂತೆ ಕಿಚ್ಚುಹಾಯಿಸುವ ಮೂಲಕ ಸಂಭ್ರಮಿಸಿದರು. ಜಾನುವಾರುಗಳ ಕಿಚ್ಚುಹಾಯಿಸುವುದನ್ನು ಕಂಡು ಜನರು ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದರು. ಇನ್ನೂ ಹೆಣ್ಣುಮಕ್ಕಳು ಬಗೆಬಗೆಯ ಉಡುಗೆ ತೊಡುಗೆಗಳನ್ನು ತೊಟ್ಟು ಮನೆಮನೆಗೆ ಎಳ್ಳುಬೆಲ್ಲ ಹಂಚುವ ಮೂಲಕ ಸಂಭ್ರಮಿಸಿದರು.ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮದ್ದೂರು: ಪಟ್ಟಣದ ಶಿವಪುರದ ಪೂರ್ಣಪ್ರಜ್ಞ ಶಾಲೆ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಂಡ್ಯದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ ಭಾಷಣದಲ್ಲಿ ಎಸ್.ಪಿ.ಚಂದನ, ಹಿಂದಿ ಭಾಷಣದಲ್ಲಿ ಕುಲ್ಸುಮ ನಿದ ಮತ್ತು ಗಜಲ್‌ನಲ್ಲಿ ಸಾರಾ ಅಲಿ ಪ್ರಥಮ ಬಹುಮಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆ ಮತ್ತು ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಧನಂಜಯ, ಸಂಸ್ಥೆ ಅಧ್ಯಕ್ಷೆ ಕಸ್ತೂರಿ ಅನಂತಗೌಡ, ಮುಖ್ಯ ಶಿಕ್ಷಕ ಎಚ್.ಆರ್.ಅನಂತೇಗೌಡ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.