ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ, ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ಮಾಡಿದರು.ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪೀಹಳ್ಳಿ ರಮೇಶ್ ನೇತೃತ್ವದಲ್ಲಿ ಪಟ್ಟಣದ ಮೈಸೂರು ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಪೀಹಳ್ಳಿ ರಮೇಶ್ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ 3ನೇ ಬಾರಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವುದು ಅವರ ಆಡಳಿತದ ಅವಧಿಯಲ್ಲಿ ಮಾಡಿರುವ ಜನಪರ ಕೆಲಸಗಳಿಗೆ ದೇಶದ ಜನರು ಮನ್ನಣೆ ನೀಡಿರುವುದು ಕಂಡು ಬರುತ್ತಿದೆ ಎಂದರು.ಬಿಜೆಪಿ ಆಡಳಿತಕ್ಕೆ ದೇಶವಲ್ಲದೆ ವಿವಿಧ ದೇಶದಲ್ಲಿ ಮೋದಿಯವರ ವರ್ಚಸ್ಸು ಇನ್ನಷ್ಟು ಹೆಚ್ಚಾಗಿದೆ. ದೇಶದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಿ. ಮಾಜಿ ಸಿ.ಎಂ.ಕುಮಾರಸ್ವಾಮಿ ಕೇಂದ್ರ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಒಳ್ಳೆಯ ಕೆಲಸ ಮಾಡಲಿ ಎಂದರು.
ಈ ವೇಳೆ ಮೈತ್ರಿ ಕೂಟದ ಕಾರ್ಯಕರ್ತರಲ್ಲರು ಜೈಕಾರದ ಘೋಷಣೆಗಳ ಕೂಗಿ ಸಂಭ್ರಮಿಸಿದರು. ಪ್ರಧಾನಿ ಮೋದಿ ಸೇರಿದಂತೆ ಸಚಿವ ಸಂಪುಟದ ಎಲ್ಲರಿಗೂ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು.ಪಂಜು ಮೆರವಣಿಗೆಯಲ್ಲಿ ರಾಜ್ಯ ಬಿಜೆಪಿ ರೈತ ಮರ‍್ಚ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ, ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ, ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಮುಖಂಡರಾದ ಮಹದೇವು, ಕೃಷ್ಣ, ಸಾಮಿಯಾನ ಪುಟ್ಟರಾಜು, ಹೇಮಂತ್ ಕುಮಾರ್, ಉಮೇಶ್,ನಾರಾಯಣ್, ಶ್ರೀನಿವಾಸ್ ರಾಮಕೃಷ್ಣ ಸೇರಿದಂತೆ ಇತರರಿದ್ದರು.
ದೇಗುಲದಲ್ಲಿ ಪೂಜೆ ಸಲ್ಲಿಕೆಶ್ರೀರಂಗಪಟ್ಟಣ:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗಂಜಾಂನ ಕರಡಿ ಮಾರಮ್ಮ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ನಾರಾಯಣ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿದ ಸಾರ್ವಜನಿಕರಿಗೆ ತೀರ್ಥ ಪ್ರಸಾದ, ಸಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮೋದಿ, ಎಚ್ಡಿಕೆ ಪ್ರಮಾಣ ವಚನ ಸ್ವೀಕಾರ ಸಿಹಿ ಹಂಚಿ ಸಂಭ್ರಮಹಲಗೂರು:ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಪಟ್ಟಣದ ಚನ್ನಪಟ್ಟಣ ರಸ್ತೆಯ ಸೆಂಟ್ರಲ್ ಬ್ಯಾಂಕ್ ಬಳಿ ಸಂಭ್ರಮಾಚರಣೆ ಮಾಡಿದರು.
ಟಿವಿಯಲ್ಲಿ ನೇರ ಪ್ರಸಾರವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಆಯೋಜಿಸಿ ನಂತರ ಪ್ರಮಾಣವಚನ ಸ್ವೀಕರಿಸುವ ಶುಭ ಸಂದರ್ಭದ ವೇಳೆ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಪರ ಜಯ ಘೋಷಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಆಚರಿಸಿದರು.ಈ ವೇಳೆ ನೂರಾರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.