ನಗರದ ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಾಸ ಸಾಹಿತ್ಯದ ದಿಗ್ಗಜರಲ್ಲಿ ಅಪ್ರತಿಮರಾದ ಕನಕದಾಸರ 539ನೇ ಜಯಂತಿಯನ್ನು ಆಚರಿಸಲಾಯಿತು.
ದಾವಣಗೆರೆ: ನಗರದ ಸೇಂಟ್ ಜಾನ್ಸ್ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ದಾಸ ಸಾಹಿತ್ಯದ ದಿಗ್ಗಜರಲ್ಲಿ ಅಪ್ರತಿಮರಾದ ಕನಕದಾಸರ 539ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಪಠ್ಯಕ್ರಮ ವಿಭಾಗದ ಪ್ರಾಚಾರ್ಯ ಸೈಯದ್ ಆರಿಫ್ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜಾತಿಭೇದವನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ತಮ್ಮ ಕೀರ್ತನೆಗಳ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಚ್.ಆರ್.ಅನಿಲ್ ಕುಮಾರ್, ಕಾರ್ಯದರ್ಶಿ ಟಿ.ಎಂ.ಉಮಾಪತಯ್ಯ, ಖಜಾಂಚಿ ಪ್ರವೀಣ್ ಹುಲ್ಲುಮನೆ, ಶಾಲೆಯ ಪ್ರಾಂಶುಪಾಲರಾದ ಪ್ರೀತಾ. ಟಿ. ರೈ, ಉಪಪ್ರಾಂಶುಪಾಲರಾದ ಎಸ್.ಎಂ.ನೇತ್ರಾವತಿ, ಕೆ.ಪುನಿತ, ಶಿಕ್ಷಕ, ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.