ಹನೂರಲ್ಲಿ ಕನಕದಾಸರ ಜಯಂತಿ ಆಚರಣೆ

| Published : Nov 19 2024, 12:49 AM IST

ಸಾರಾಂಶ

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹ ಮುಂಭಾಗ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಂಆರ್ ಮಂಜುನಾಥ್ ಭಾಗವಹಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಹನೂರು: ತಾಲೂಕು ಆಡಳಿತದ ವತಿಯಿಂದ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಸೋಮವಾರ ಕನಕದಾಸರ ಭಾವಚಿತ್ರಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದರು. ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರ ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನತೆ ದೃಷ್ಟಿಕೋನದಿಂದ ನೋಡುವಂತೆ ತಿಳಿಸಿದರು ಎಂದರು.

ಬಳಿಕ ಪಪ ಸದಸ್ಯ ಹರೀಶ್ ಮಾತನಾಡಿ, ಮನುಕುಲ ಪ್ರೀತಿಸುವುದನ್ನು ಹೇಳಿದ ಈ ಮಹಾತ್ಮರು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ನೀಡಿದರು. ಇಂತಹ ಮಹಾನ್‌ ಚೇತನರ ತತ್ವಗಳ ಬಗ್ಗೆ ಪ್ರತಿಯೊಬ್ಬರು ಅರಿವು ಹೊಂದಬೇಕು ಎಂದರು. ಈ ಸಂದರ್ಭದಲ್ಲಿ ಗುರುಪ್ರಸಾದ್ ಪಟ್ಟಣ ಪಂಚಾಯತಿ ಅಧ್ಯಕ್ಷ ಮುಮ್ತಾಜ್ ಭಾನು, ಉಪಾಧ್ಯಕ್ಷ ಅನಂದ್ ಕುಮಾರ್ ಸದಸ್ಯರಾದ ಹರೀಶ್, ಮಹೇಶ್ ನಾಯಕ್ ಮಹೇಶ್, ಸೋಮಣ್ಣ, ಬಿಇಒ ಗುರಲಿಂಗಯ್ಯ, ತಾಪಂ ಅರೊಗ್ಯಾಧಿಕಾರಿ ಪ್ರಕಾಶ್ರು ಮತ್ತಿತರರು ಹಾಜರಿದ್ದರು.