ಸಾರಾಂಶ
ಎರಡುವರೆ ಸಾವಿರ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಆದಿಕವಿ ಪಂಪನಿಂದ ಹಿಡಿದ ಕುವೇಂಪು, ಬೇಂದ್ರೆ ಸೇರಿದಂತೆ ಅನೇಕ ಕವಿ, ಸಾಹಿತಿಗಳು, ಕದಂಬ, ವಿಜಯನಗರ ಸಾಮ್ರಾಜ್ಯದಿಂದ ಹಿಡಿದು ಮೈಸೂರು ಸಂಸ್ಥಾನದವರೆಗೆ ಹಲವು ರಾಜಮನೆತನಗಳು ಪೋಷಣೆ ಮಾಡಿದ್ದಾರೆ. ಅದರಂತೆ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರು ಒಗ್ಗಟ್ಟಿನಿಂದ ಹೋರಾಟಬೇಕಿದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ 69 ಕನ್ನಡ ರಾಜ್ಯೋತ್ಸವವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಗೈರು ಹಾಜರಿಯಲ್ಲಿ ತಾಲೂಕು ಆಡಳಿತದಿಂದ ಆಚರಿಸಲಾಯಿತು.ಉಪ ವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ತೆರದ ವಾಹನಗಳಲ್ಲಿ ವಿವಿಧ ಶಾಲೆಗಳ ಪಥಸಂಚಲನ ಹಾಗೂ ಬ್ಯಾಂಡ್‌ಸೆಟ್ ತಂಡ ವಂದಿಸಿ, ಬಳಿಕ ವಿದ್ಯಾರ್ಥಿಗಳ ಪಥಸಂಚಲನ ತಂಡಗಳಿಂದ ಧ್ವಜಾವಂದನೆ ಸ್ವೀಕರಿಸಿದರು.
ಉಪ ವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಮಾತನಾಡಿ, ಎರಡುವರೆ ಸಾವಿರ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಆದಿಕವಿ ಪಂಪನಿಂದ ಹಿಡಿದ ಕುವೇಂಪು, ಬೇಂದ್ರೆ ಸೇರಿದಂತೆ ಅನೇಕ ಕವಿ, ಸಾಹಿತಿಗಳು, ಕದಂಬ, ವಿಜಯನಗರ ಸಾಮ್ರಾಜ್ಯದಿಂದ ಹಿಡಿದು ಮೈಸೂರು ಸಂಸ್ಥಾನದವರೆಗೆ ಹಲವು ರಾಜಮನೆತನಗಳು ಪೋಷಣೆ ಮಾಡಿದ್ದಾರೆ. ಅದರಂತೆ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರು ಒಗ್ಗಟ್ಟಿನಿಂದ ಹೋರಾಟಬೇಕಿದೆ ಎಂದರು.ಮಕ್ಕಳಿಂದ ನೃತ್ಯ ಪ್ರದರ್ಶನ:
ವಿವಿಧ ಶಾಲೆಗಳಿಂದ ಆಗಮಿಸಿದ್ದ ಮಕ್ಕಳ ನೃತ್ಯತಂಡದಿಂದ ಹಲವು ಕನ್ನಡ ಹಾಡುಗಳಿಗೆ ಮನಮೋಹಕ ನೃತ್ಯ ಪ್ರದರ್ಶನ ಮಾಡುವ ಮೂಲಕ ನೆರೆದಿದ್ದ ಕನ್ನಡಾಭಿಮಾನಿಗಳು, ಪ್ರೇಕ್ಷಕರನ್ನು ರಂಜಿಸಿದರು. ಪಟ್ಟಣದ ಬಿಜಿಎಸ್ ಶಾಲೆ ವಿದ್ಯಾರ್ಥಿಗಳು ಮೈಸೂರು ದಸರಾ ಅಂಬಾರಿ ಹೊತ್ತ ಆನೆ ಅರ್ಜುನ ಕುರಿತು ಪ್ರದರ್ಶಸಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಮಕ್ಕಳ ನೃತ್ಯಕ್ಕೆ ಪ್ರೇಕ್ಷಕರು ಶಿಳ್ಳೆ,ಚಪ್ಪಾಳೆ ತಟ್ಟಿಸಂಭ್ರಮಿಸಿದರು.ಇದೇವೇಳೆ ತಾಲೂಕು ಆಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಇದರಲ್ಲಿ ಪ್ರತಿಕೋದ್ಯಮ ಕ್ಷೇತ್ರದವನ್ನು ನಿರ್ಲಕ್ಷ್ಯ ಮಾಡಿದ ತಾಲೂಕು ಆಡಳಿತದ ನಡೆಯನ್ನು ವಿರೋಧಿಸಿ ಕೆಲವು ಪತ್ರಕರ್ತರು ಸಮಾರಂಭದ ವೇದಿಕೆಯಲ್ಲಿ ತಹಸೀಲ್ದಾರ್ ವಿರುದ್ಧ ಆಕ್ರೋಶ ಹೊರಹಾಕಿದರು.
ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ತಹಸೀಲ್ದಾರ್ ಸಂತೋಷ್, ತಾಪಂ ಇಒ ಲೋಕೇಶ್‌ಮೂರ್ತಿ, ಪುರಸಭೆ ಉಪಾಧ್ಯಕ್ಷ ಅಶೋಕ್, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್, ಸೇರಿದಂತೆ ಪುರಸಭೆ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳು ಅಧ್ಯಕ್ಷರು, ಮುಖಂಡರು ಹಾಜರಿದ್ದರು.