ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುಡಾ.ಜಿ. ಪರಮೇಶ್ವರ ಅಭಿಮಾನಿಗಳ ಬಳಗದ ವತಿಯಿಂದ ನಗರದ ಕಲಾಮಂದಿರದಲ್ಲಿ ಆ.25ರ ಬೆಳಗ್ಗೆ 10.30ಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಜನ್ಮ ದಿನದ ಅಂಗವಾಗಿ ಪರಮೋತ್ಸವ ಅಭಿಮಾನದ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಪಂ ಮಾಜಿ ಸದಸ್ಯ ಸಿದ್ದಪ್ಪ ತಿಳಿಸಿದರು.ಈ ಕಾರ್ಯಕ್ರಮವನ್ನು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸುವರು. ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೃಹ ಸಚಿವ ಡಾ.ಜಿ. ಪರಮೇಶ್ವರ,. ಕನ್ನಿಕಾ ಪರಮೇಶ್ವರಿ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆ ವಹಿಸುವರು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಅಭಿನಂದನಾ ಗೀತೆಯನ್ನು ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಸಾಕ್ಷ್ಯಚಿತ್ರವನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಅಭಿನಂದನಾ ಗ್ರಂಥವನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸುವರು. ಛಾಯಾಚಿತ್ರ ಪ್ರದರ್ಶನವನ್ನು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಶಾಸಕ ತನ್ವೀರ್ ಸೇಠ್ ಅಭಿನಂದನಾ ನುಡಿಗಳನ್ನಾಡುವರು ಎಂದರು.
ಅಭಿನಂದನಾ ಸಮಿತಿ ಅಧ್ಯಕ್ಷ ರಾಜು ಬಿಳಿಕೆರೆ, ಬಳಗದ ಜಿಲ್ಲಾಧ್ಯಕ್ಷ ಮಂಜುನಾಥ್, ನಾಗರಾಜು, ಪದ್ಮನಾಭ್, ಪರಂಜ್ಯೋತಿ, ಕೆ. ಮಹೇಶ್, ಕೃಷ್ಣ ಇದ್ದರು.