ಸಾರಾಂಶ
ಕಡೂರು: ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆ ಬಳಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಲಿಕೆರೆ ಮಠದ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಯಳನಡು ಮಠದ ಶ್ರೀ ಜ್ಞಾನಪ್ರಭು ಸಿದ್ದ ರಾಮದೇಶಿಕೇಂದ್ರ ಸ್ವಾಮೀಜಿ, ಬೀರೂರು ರಂಭಾಪುರಿ ಶಾಖಾ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಆನಂದ್, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗು ಮಾಜಿ ಶಾಸಕ ಬೆಳ್ಳಿಪ್ರಕಾಶ್, ಮಾಜಿ ಶಾಸಕ ಕೆ.ಬಿ.ಮಲ್ಲಿಕಾರ್ಜುನ್, ಕಡೂರು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಮಾಜಿ ಪ್ರಧಾನರಾದ ಎಂ.ಆರ್. ಮರುಳಸಿದ್ದಪ್ಪ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಅರೇಹಳ್ಳಿ ಮಲ್ಲಿಕಾರ್ಜುನ್, ಭೈರೇಗೌಡ, ಬಿ.ಪಿ.ದೇವಾನಂದ್, ಕೆ.ಎಂ. ವಿನಾಯಕ್, ಪ್ರಸನ್ನ, ದಾನಿ ಉಮೇಶ್,ಟಿ.ಆರ್.ಲಕ್ಕಪ್ಪ.ಶ್ರೀನಿವಾಸ್ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಪದಾಧಿಕಾರಿಗಳು ಹಾಗೂ ಅನೇಕ ಗಣ್ಯರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
--10ಕೆಕೆಡಿಯು4. ಕಡೂರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ, ಶ್ರೀ ರುದ್ರಮುನಿಶಿವಾಚಾರ್ಯ ಸ್ವಾಮೀಜಿ ಶಾಸಕ ಕೆ.ಎಸ್.ಆನಂದ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್, ದೇವಾನಂದ್, ಮರುಳಸಿದ್ದಪ್ಪ, ಭಂಡಾರಿಶ್ರೀನಿವಾಸ್, ಕೆ.ಎಂ.ವಿನಾಯಕ್ ಮತ್ತಿತರಿದ್ದರು.