ಕಾರ್ಕಳ: ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಮೌಲ್ಯಸುಧಾ ಸರಣಿ ಮಾಲಿಕೆಯು ಸುವರ್ಣ ಸಂಚಿಕೆ (50ನೇ ಸಂಚಿಕೆ) ತಲುಪಿರುವುದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಬದ್ಧತೆಗೆ ಸಾಕ್ಷಿ ಎಂದು ಸಾಣೂರಿನ ರಾಜೇಶ್ವರಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹೇಳಿದರು.ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾದ ಮೌಲ್ಯಸುಧಾ ಸರಣಿ ಮಾಲಿಕೆಯ 50ನೇ ಸಂಚಿಕೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ವಿದ್ವಾಂಸ ಮುನಿರಾಜ್ ರೆಂಜಾಳ, ನಿವೃತ್ತ ಪ್ರಾಂಶುಪಾಲ ಬೇಬಿ ಈಶ್ವರ ಮಂಗಲ, ನಿವೃತ್ತ ಶಿಕ್ಷಕ ಜಗದೀಶ್, ಉದ್ಯಮಿ ದೇವೇಂದ್ರ ನಾಯಕ್, ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ, ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಟ್ರಸ್ಟಿಗಳಾದ ವಿದ್ಯಾವತಿ ಎಸ್. ಶೆಟ್ಟಿ ಹಾಗೂ ಅನಿಲ್ ಕುಮಾರ್ ಜೈನ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಸಿಇಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಉಪಪ್ರಾಂಶುಪಾಲ ಸಾಹಿತ್ಯ, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲ ರವಿ ಜಿ., ಅಜೆಕಾರು ಜ್ಞಾನಸುಧಾದ ಪ್ರಾಂಶುಪಾಲ ಸಂತೋಷ್, ಪ್ರೌಢಶಾಲೆ ಉಪಪ್ರಾಂಶುಪಾಲೆ ಆರತಿ ಉಪಸ್ಥಿತರಿದ್ದರು.ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ನಿರೂಪಿಸಿದರು. ಸನಾತನ ನಾಟ್ಯಾಲಯ, ಮಂಗಳೂರು ವತಿಯಿಂದ ‘ಸನಾತನ ರಾಷ್ಟ್ರಾಂಜಲಿ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.
ಲತೇಶ್ ಬಾಕ್ರಬೈಲು ನಿರೂಪಿಸಿದರು.