ಸಾರಾಂಶ
ಮೇ 2ರಂದು ಶಂಕರಾಚಾರ್ಯ ಜಯಂತಿಯನ್ನು ಕಲಾ ಮಂದಿರದ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೇ 4 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಿಸಲಾಗುವುದು. ಅಂದು ಬೆಳಗ್ಗೆ 11.30 ಗಂಟೆಗೆ ಮಾಡಲಾಗುವುದು. ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು.
ಕನ್ನಡಪ್ರಭ ವಾರ್ತೆ ಮೈಸೂರು
ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಜಯಂತಿಗಳಾದ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಹಾಗೂ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ 2ರಂದು ಶಂಕರಾಚಾರ್ಯ ಜಯಂತಿಯನ್ನು ಕಲಾ ಮಂದಿರದ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೇ 4 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಿಸಲಾಗುವುದು. ಅಂದು ಬೆಳಗ್ಗೆ 11.30 ಗಂಟೆಗೆ ಮಾಡಲಾಗುವುದು. ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಅಂದು ಬೆಳಗ್ಗೆ 9.30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಮೆರವಣಿಗೆ ಪ್ರಾರಂಭ ಮಾಡಲಾಗುವುದು. ಮೇ 10 ರಂದು ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಆಚರಿಸಾಗುವುದು. ಅಂದು ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು ಎಂದರು.ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳನ್ನು ಆಚರಿಸಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲಿಸುವುದಾಗಿfದೆ ಎಂದರು.
ಮೆರವಣಿಗೆ ಪ್ರಾರಂಭವಾಗುವ ಸ್ಥಳವಾದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಮಿಯಾನ ಸ್ವಚ್ಛತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ ಜಯಂತಿ ನಡೆಯುವ ಸ್ಥಳದ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರದಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾ ಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದರು.
ತಮ್ಮ ತಮ್ಮ ಜಯಂತಿಗಳ ಆಚರಣೆಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಇದ್ದರು.
;Resize=(128,128))
;Resize=(128,128))
;Resize=(128,128))