ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವುದಕ್ಕೆ ಮದಕರಿನಾಯಕ ಪ್ರತಿಮೆ ಮುಂಭಾಗದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಗೆಲ್ಲಿಸಿರುವುದು ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಿಕ್ಕ ಜಯ. ಪಶ್ವಿಮ ಬಂಗಾಳದಲ್ಲಿ ಹಿಂದೂಗಳ ವಿರೋಧಿ ಸರ್ಕಾರಕ್ಕೆ ಬೇಸತ್ತ ಜನತೆ ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಸ್ಸಾಂನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಹಿಮಂತ್ ಬಿಸ್ವಾರವರು ನೀಡಿರುವ ಜನಪರ ಯೋಜನೆಗಳಿಗೆ ಈ ಚುನಾವಣೆಯಲ್ಲಿ ಪ್ರತಿಫಲ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ನಡಹಳ್ಳಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಉಪಾಧ್ಯಕ್ಷೆ ಅಶ್ವಿನಿ ಶಂಕರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ನಗರ ಮಂಡಲ ಮಾಜಿ ಅಧ್ಯಕ್ಷ ವಿ.ಆರ್.ನಾಗರಾಜ್, ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ಜಿ.ಎಚ್.ಮೋಹನ್‌ಕುಮಾರ್, ವೆಂಕಟೇಶ್ ಯಾದವ್, ನಗರ ಮಂಡಲ ಅಧ್ಯಕ್ಷ ಲೋಕೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ವಕ್ತಾರ ನಾಗರಾಜ್‌ಬೇದ್ರೆ, ದಗ್ಗೆ ಶಿವಪ್ರಕಾಶ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ರಾಜೇಶ್ ಬುರುಡೆಕಟ್ಟೆ, ನಗರಸಭೆ ಮಾಜಿ ಸದಸ್ಯರುಗಳಾದ ಹರೀಶ್, ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ರಜಿನಿ, ಶ್ಯಾಮಲ ಶಿವಪ್ರಕಾಶ್, ಬಸಮ್ಮ, ಶೈಲಜಾರೆಡ್ಡಿ, ಮಂಜುಳಮ್ಮ ಇನ್ನು ಮುಂತಾದವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.