Celebrations of Ayudha Puja and Vijayadashami in Malenadu

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಜಿಲ್ಲೆಯಾದ್ಯಂತ ಗರಿಗೆದರಿದ್ದು, ಪೂಜೆಗೆ ಅಗತ್ಯ ಹೂವು-ಹಣ್ಣು, ಬೂದುಗುಂಬಳ ಖರೀದಿಯ ಭರಾಟೆ ಜೋರಾಗಿ ಸಾಗಿದೆ. ನವರಾತ್ರಿ ಆಚರಣೆಯ ವೇಳೆ ಪ್ರತಿ ಹೂವು ದರ ಏರಿಕೆ ಆಗುತ್ತದೆ. ಆದರೆ, ಕೆಲ ದಿನಗಳ ಹಿಂದೆ ಹೂವಿನ ದರ ಕುಸಿದಿತ್ತು. ಹಬ್ಬದ ವೇಳೆಗೆ ಮತ್ತೆ ಹೂವಿನ ದರ ಹೆಚ್ಚಾಗಿದೆ. ಎರಡು ವಾರಗಳವರೆಗೆ ಧಾರ್ಮಿಕ ಆಚರಣೆಗಳು ನಡೆಯುವುದರಿಂದ ಹೂವಿಗೆ ಹೆಚ್ಚಿನ ಬೇಡಿಕೆ ಬಂದಿದೆ.

ದಸರಾ ಹಬ್ಬದಲ್ಲಿ ಚಂಡು ಹೂ, ಸೇವಂತಿಗೆ, ಕನಕಾಂಬರ, ಗುಲಾಬಿ ಹೂವುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಆಯುಧ ಪೂಜೆ ದಿನ ವಾಹನ, ಕಚೇರಿ, ಮನೆಯಲ್ಲಿರುವ ವಸ್ತುಗಳನ್ನು ಅಲಂಕರಿಸಿ ಪೂಜೆ ಮಾಡಲಾಗುತ್ತದೆ. ವಾಹನಗಳ ಅಲಂಕಾರಕ್ಕೆ ಹೂವು ಹೆಚ್ಚಾಗಿ ಮಾರಾಟವಾಗುವುದರಿಂದ ಹೂವಿನ ಬೇಡಿಕೆಯೂ ಹೆಚ್ಚಾಗಿದೆ.

ಪ್ರತಿ ಕೆ.ಜಿ ಕನಕಾಂಬರ 800 ರು., ಮಲ್ಲಿಗೆ 800 ರು., ಗುಲಾಬಿ 400 ರು., ಸೇವಂತಿಗೆ 400 ರು.ನಂತೆ ಮಾರಾಟವಾಗುತ್ತಿವೆ. ಆಯುಧ ಪೂಜೆಯ ದಿನ ಬಳಕೆಗೆ ಬೂದುಗುಂಬಳ ಪ್ರತಿ ಕೆ.ಜಿಗೆ 40 ರಿಂದ ಆರಂಭಗೊಂಡು ಗಾತ್ರದ ಆಧಾರದ ಮೇಲೆ ಒಂದಕ್ಕೆ 100- 200 ರು. ವರೆಗೆ ಮಾರಾಟವಾದವು.

ನಿಂಬೆ ಹಣ್ಣು ಹಾಗೂ ಇತರ ಹೂ, ಹಣ್ಣುಗಳ ಬೆಲೆ ಈ ಬಾರಿ ಹೆಚ್ಚಳವಾಗಿದ್ದು, ಚೆಂಡು ಹೂವಿಗೆ ಮಾರಿಗೆ 60 ರಿಂದ 100 ರವರೆಗೆ ಇದೆ. ಇತರ ಸೇವಂತಿಗೆ, ಜಾಜಿ, ಮತ್ತು ಕಾಕಡ ಮಾರಿಗೆ 150 ರಿಂದ 250 ರವರೆಗೆ ಇದೆ. ಬಿಡಿ ಹೂವುಗಳು ಕೆಜಿ.400 ರು. ಗಡಿ ದಾಟಿದೆ. ಸೇಬು, ಬಾಳೆಹಣ್ಣು, ಮುಸುಂಬಿ ಎಲ್ಲಾ ರೀತಿಯ ಹಣ್ಣುಗಳು ಕೂಡ ಏರಿಕೆಯಾಗಿವೆ.ನಗರದ ಗಾಂಧಿ ಬಜಾರ್, ದುರ್ಗಿಗುಡಿ, ನೆಹರು ರಸ್ತೆ, ಬಿ.ಎಚ್. ರಸ್ತೆ, ಪೊಲೀಸ್ ಚೌಕಿ, ಗೋಪಾಳ, ವಿನೋಬನಗರ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿದ್ದವು. ತರಕಾರಿ, ದಿನಸಿ, ಅಲಂಕಾರಿಕ ವಸ್ತುಗಳು ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆಕಂದು, ಎಲೆ, ತೆಂಗಿನಕಾಯಿಯ ಖರೀದಿ ಜೋರಾಗಿತ್ತು.------------------------

ಪೋಟೋ: 19ಎಸ್‌ಎಂಜಿಕೆಪಿ07

ಶಿವಮೊಗ್ಗದ ನಗರದ ಆಯುಧ ಪೂಜೆಗೆ ಬೂದುಗುಂಬಳ, ಬಾಳೆಕಂದು ಖರೀದಿ ಮಾಡುತ್ತಿರುವ ಗ್ರಾಹಕರು.

-----------

ಪೋಟೋ: 19ಎಸ್‌ಎಂಜಿಕೆಪಿ08

ಶಿವಮೊಗ್ಗದ ನಗರದ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆ ಚಂಡು ಹೂವು ಮಾರಾಟ ಜೋರಾಗಿತ್ತು.

----------------

ಪೋಟೋ: 19ಎಸ್‌ಎಂಜಿಕೆಪಿ09

ಶಿವಮೊಗ್ಗದ ನಗರದ ಗಾಧಿಬಜಾರ್‌ನಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆ ಖರೀದಿಗೆ ಮುಗಿಬಿದ್ದಿರುವ ಜನ.