ಭದ್ರಾ ಮೇಲ್ದಂಡೆಗೆ ಕೇಂದ್ರ ದುಡ್ಡು ಕೊಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

| Published : Feb 10 2024, 01:45 AM IST / Updated: Feb 10 2024, 05:01 PM IST

ಭದ್ರಾ ಮೇಲ್ದಂಡೆಗೆ ಕೇಂದ್ರ ದುಡ್ಡು ಕೊಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜಲಸಂಪನ್ಮೂಲ ಸಚಿವಶೆಕಾವತ್ ಅವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ನಾನೂ ಕೂಡ ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಭದ್ರಾ ಮೇಲ್ದಂಡೆ ಯೋಜನೆಗೆ 2023-24 ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರ 5300 ಕೋಟಿ ರು.ಗಳ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು ಈವರೆಗೆ ಒಂದು ರೂಪಾಯಿಯನ್ನೂ ನೀಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಶುಕ್ರವಾರ ಹೊಸದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾ ಮೇಲ್ಜಂಡೆಗೆ ಇದುವರೆಗೂ ರಾಜ್ಯ ಸರ್ಕಾರ 8 ಸಾವಿರ ಕೋಟಿ ರು. ಖರ್ಚು ಮಾಡಿದ್ದೇವೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಜಲಸಂಪನ್ಮೂಲ ಸಚಿವಶೆಕಾವತ್ ಅವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ನಾನೂ ಕೂಡ ಮನವಿ ಮಾಡಿದ್ದೇನೆ. ಇದುವರೆಗೂ ಒಂದು ಪೈಸೆ ಬಿಡುಗಡೆಯಾಗಿಲ್ಲವೆಂದರು.

ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿರುವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಹೇಳಿದಂತೆ ₹5300 ಕೋಟಿ ಒದಗಿಸುವುದು ಅವರ ಜವಾಬ್ಧಾರಿ. 15ನೇ ಹಣಕಾಸು ಆಯೋಗದವರು ಒದಗಿಸಿದ್ದ 5495 ಕೋಟಿ ರು.ಗಳ ವಿಶೇಷ ಅನುದಾನ ಹಾಗೂ 6 ಸಾವಿರ ಕೋಟಿ ಸೇರಿ 11495 ಕೋಟಿ ರು.ಗಳನ್ನು ತಿರಸ್ಕರಿಸಿದರು. 

ಇದು ಅನ್ಯಾಯವಲ್ಲವೇ?
ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24 ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರದಿಂದ 5300 ಕೋಟಿ ರು.ಗಳು ಬರಲಿದೆ ಎಂದು ಪುನರುಚ್ಚರಿಸಿದ್ದಾರೆ. ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತೇವೆ ಎಂದಿದ್ದರೂ ಇನ್ನೂ ಘೋಷಣೆ ಮಾಡಿಲ್ಲವೆಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.