ಸಾರಾಂಶ
ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಬಡಜನರು, ಯುವಕರು, ಮಹಿಳೆಯರು ಮತ್ತು ರೈತರ ಪರವಾಗಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಕೈಗಾರಿಕಾ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಬ್ಯಾಂಕ್ ಆಫ್ ಬರೋಡ್ ಮತ್ತು ಕರ್ನಾಟಕ ಬ್ಯಾಂಕ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತೆಯನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಸರ್ವ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಕೇಂದ್ರ ಸಚಿವ, ನಮ್ಮ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಜನರಿಗೆ ಯೋಜನೆ ಫಲ ದೊರಕುವಂತೆ ಮಾಡಲು ವಿಕಸಿತ ಸಂಕಲ್ಪ ಯಾತ್ರೆಯ ಮೂಲಕ ಮೋದಿ ಗಾಡಿ ನಿಮ್ಮ ಹಳ್ಳಿಗಳಿಗೆ ಬಂದಿದೆ ಎಂದರು. ಕೇಂದ್ರ ಸರ್ಕಾರದ ಎಲ್ಲ ಜನಪರ ಯೋಜನೆಗಳ ಬಗ್ಗೆ ಸಭೆಯಲ್ಲಿ ವಿವರಿಸಿ ಯೋಜನೆ ಬಗೆಗಿನ ಕರಪತ್ರಗಳು ಮತ್ತು ಕ್ಯಾಲೆಂಡರ್ ಹಾಗೂ ಉಜ್ವಲ ಯೋಜನೆ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸಿದರು.
ರಾಮ ಮಂದಿರ ನಿರ್ಮಾಣದಿಂದ ದೇಶದ ಜನರ ಅಸ್ಮಿತೆಯನ್ನು ನಿರ್ಮಿಸಲಾಗಿದೆ. ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ರದ್ದು ಪಡಿಸಿದೆ. ಜ.22 ರ ಶ್ರೀ ರಾಮಮಂದಿರ ಉದ್ಘಾಟನಾ ಸಮಾರಂಭವನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿರುವುದು ಅದರ ಕೀಳು ಮನಸ್ಥಿತಿಯನ್ನು ಬಯಲುಗೊಳಿಸಿದೆ ಎಂದು ಕಿಡಿಕಾರಿದರು. ತಹಸೀಲ್ದಾರ್ ನಿಸರ್ಗಪ್ರಿಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್, ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಸಂಗಮೇಶ್, ನಬಾರ್ಡ್ ಬ್ಯಾಂಕಿನ ಅರ್ಪಿತ ಸೇರಿದಂತೆ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಸೇರಿದಂತೆ ಹಲವರು ಇದ್ದರು.-------------
11ಕೆಎಂಎನ್ ಡಿ15ಕೆ.ಆರ್.ಪೇಟೆ ಎಪಿಎಂಸಿ ಆವರಣದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಕ್ರಿಶನ್ ಪಾಲ್ ಗುರ್ಜರ್ ಫಲಾನುಭವಿಗಳಿಗೆ ಉಜ್ವಲ ಯೋಜನೆ ಗ್ಯಾಸ್ ಸ್ಟೌವ್ ಗಳನ್ನು ವಿತರಿಸಿದರು.