ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸುಧಾಕರ್

| Published : Apr 07 2024, 01:56 AM IST / Updated: Apr 07 2024, 08:20 AM IST

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸುಧಾಕರ್
Share this Article
  • FB
  • TW
  • Linkdin
  • Email

ಸಾರಾಂಶ

ಅಪ್ಪರ್ ಭದ್ರಾ ಯೋಜನೆಗೆ 5300 ಸಾವಿರ ಕೋಟಿ ರು. ಮೀಸಲಿಟ್ಟಿದ್ದ ಕೇಂದ್ರ ಸರ್ಕಾರ ಈ ವರೆಗೂ ನಯಾ ಪೈಸೆ ನೀಡದೆ ಜಿಲ್ಲೆಯ ಜನರಿಗೆ ಮೋಸ ಮಾಡಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

 ಮೊಳಕಾಲ್ಮುರು:  ಅಪ್ಪರ್ ಭದ್ರಾ ಯೋಜನೆಗೆ 5300 ಸಾವಿರ ಕೋಟಿ ರು. ಮೀಸಲಿಟ್ಟಿದ್ದ ಕೇಂದ್ರ ಸರ್ಕಾರ ಈ ವರೆಗೂ ನಯಾ ಪೈಸೆ ನೀಡದೆ ಜಿಲ್ಲೆಯ ಜನರಿಗೆ ಮೋಸ ಮಾಡಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. 

ತಾಲೂಕಿನ ರಾಂಪುರ ಗ್ರಾಮದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಮೊಳಕಾಲ್ಮುರು ಮೊದಲಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಬಾರಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿದ್ದೀರಿ. ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ರಾಜ್ಯದ ಜನರಿಗೆ ನೆರವಾಗಿದೆ. ಅಪ್ಪರ್ ಭದ್ರಾ ಯೋಜನೆಯಲ್ಲಿ 5300 ಕೋಟಿ ರು. ಅನುದಾನ ನೀಡುತ್ತೇವೆಂದು ಹೇಳಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾದರೆ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಕಾರ್ಯಕರ್ತರು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯವನ್ನು ಪಡೆಯುತ್ತಿರುವ ಜನತೆ ಕಾಂಗ್ರೆಸ್ ಪರವಾಗಿದ್ದಾರೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ನನ್ನ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಇರುವಂತ ಪ್ರದೇಶಗಳಿಗೆ ಟ್ಯಾಂಕರ್ ವ್ಯವಸ್ಥೆ, ಸಮುದಾಯ ಭವನ ಸೇರಿದಂತೆ ಕೇಂದ್ರ ಸರ್ಕಾರದ ನಾನಾ ಯೋಜನೆಗಳನ್ನು ತಂದಿದ್ದೇನೆ. ದೇಶದಲ್ಲಿ ಸಾಮಾಜಿಕ ಅಸಮಾನತೆ ಹೋಗಲಾಡಬೇಕಿದೆ. ಯುವ ಪೀಳಿಗೆಯನ್ನು ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಕಿತ್ತೊಗೆಯಲು ಕಾರ್ಯಕರ್ತರು ಕಟಿ ಬದ್ದರಾಗಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ಕೊಡಿಸುವ ಮೂಲಕ ನಿಮ್ಮ ಸೇವೆ ಮಾಡಲು ಅನುಕೂಲ ಕಲ್ಪಿಸಬೇಕು ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ದೇವರು ದರ್ಮ ಎಂದು ದೇಶದ ಯುವಕರನ್ನು ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಬಿಜೆಪ ಜನತೆಯನ್ನು ಮೋಸ ಮಾಡಿದೆ. 15 ಲಕ್ಷಗಳ ಭರವಸೆ ನೀಡಿದ್ದ ಮೋದಿಯವರು ಈವರೆಗೂ ನಯಾ ಪೈಸೆನೂ ನೀಡಿಲ್ಲ. ಅಚ್ಚೆ ದಿನ್ ಎಂದು ಹೇಳುತ್ತಾ ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದೆ. ಮತದಾರರು ಜಾಗೃತರಾಗಬೇಕು. ಸುಳ್ಳು ಭರವಸೆಗಳನ್ನು ನೀಡಿರುವ ಪ್ರಧಾನಿ ಮೋದಿಯವರಿಗೆ ಸೂಕ್ತ ಉತ್ತರ ನೀಡಬೇಕಾದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದರು.

 ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ಸರಳ ಸಜ್ಜಿನಿಕೆಯ ರಾಜಕಾರಣಿ ಚಂದ್ರಪ್ಪ ಸ್ನೇಹ ಜೀವಿಯಾಗಿದ್ದಾರೆ. ಉತ್ತಮ ವ್ಯಕ್ತಿತ್ವ ಉಳ್ಳಂತಹ ನಾಯಕನಿಗೆ ಹೆಚ್ಚಿನ ಮತ ನೀಡಿ ಅವರ ಗೆಲುವಿಗೆ ಸಹಕಾರ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ರಘು ಮೂರ್ತಿ, ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ, ರಾಜ್ಯ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಂ ಉಲ್ಲಾ, ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಜಿಪಂ ಮಾಜಿ ಸದಸ್ಯ ಬಾಲರಾಜ್, ಮುಖಂಡ ಎಚ್.ಟಿ.ನಾಗರೆಡ್ಡಿ ಇದ್ದರು.