ಸಾರಾಂಶ
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಕೇಂದ್ರ ಬುಡಕಟ್ಟು ಮಂತ್ರಾಲಯ ನವದೆಹಲಿಯ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗಗಳ ಕುಟುಂಬಗಳು ವಾಸವಾಗಿರುವ ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ಶಿರಾ
ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಕೇಂದ್ರ ಬುಡಕಟ್ಟು ಮಂತ್ರಾಲಯ ನವದೆಹಲಿಯ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮದಡಿಯಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗಗಳ ಕುಟುಂಬಗಳು ವಾಸವಾಗಿರುವ ಬಟ್ಟಿಗಾನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಕೇಂದ್ರ ಬುಡಕಟ್ಟು ಮಂತ್ರಾಲಯ ಕಾರ್ಯದರ್ಶಿ ಡಾ.ರಾಜಿ ಹಾಗೂ ಆದಿತ್ಯ ಶರ್ಮ ಅವರು ಭಾಗವಹಿಸಿ ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ನಂತರ ಗ್ರಾಮಸ್ಥರು ತೆರೆದಿರುವ ಆದಿಸೇವಾ ಕೇಂದ್ರಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಸಂಚರಿಸಿ ಗ್ರಾಮವನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದರಾಜು, ಯತಿಕುಮಾರ್, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ, ಮಾರ್ಗಾಧಿಕಾರಿ ಈ. ಯತೀಶ್ ಕುಮಾರ್, ಪಿಡಿಒ ಪ್ರಭಣ್ಣ, ಗ್ರಾ.ಪಂ. ಅಧ್ಯಕ್ಷ ಮಣ್ಣ ಲಿಂಗಯ್ಯ, ತರಬೇತಿದಾರ ಮಂಜುನಾಥ್, ಮಾಜಿ ಅಧ್ಯಕ್ಷರಾದ ಮಹಾದೇವಮ್ಮ, ಗ್ರಾ.ಪಂ. ಸದಸ್ಯರಾದ ಆದಿ ಸಾಥಿಯಾ, ಜೂಲೇಗೌಡ, ತಾರಕೇಶ್ವರಿ, ಆರೋಗ್ಯ ಇಲಾಖೆಯ ಕೆ.ಎನ್.ರಮೇಶ್, ಆಹಾರ ಶಿರಸ್ತೇದಾರ್, ಕೃಷಿ ಇಲಾಖೆಯ ಅಧಿಕಾರಿಗಳು,ಶಾಲಾ ಮುಖ್ಯ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಹಾಜರಿದ್ದರು.