ಪ್ರತಿ ನಾಗರಿಕನಿಗೂ ಸೌಲಭ್ಯ ನೀಡುವುದೇ ಕೇಂದ್ರ ಸರ್ಕಾರದ ಗುರಿ: ವಿಧಾನಪರಿಷತ್ ಸದಸ್ಯ ವೈಎಂ ಸತೀಶ್

| Published : Jan 09 2024, 02:00 AM IST / Updated: Jan 09 2024, 05:22 PM IST

ಪ್ರತಿ ನಾಗರಿಕನಿಗೂ ಸೌಲಭ್ಯ ನೀಡುವುದೇ ಕೇಂದ್ರ ಸರ್ಕಾರದ ಗುರಿ: ವಿಧಾನಪರಿಷತ್ ಸದಸ್ಯ ವೈಎಂ ಸತೀಶ್
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ತಿಳಿಸಿದರು.

ಬಳ್ಳಾರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ತಿಳಿಸಿದರು.

ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ನಾಗರಿಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಲಾಭವನ್ನು ಪಡೆದ ಫಲಾನುಭವಿಗಳು ದೇಶದ ಪ್ರತಿ ಮನೆಯಲ್ಲೂ ಇದ್ದಾರೆ. ಕೇಂದ್ರ ಸರ್ಕಾದ ಯೋಜನೆಗಳು ಸಮಾಜದ ಕಟ್ಟ ಕಡೆಯ ನಾಗರಿಕರಿಗೂ ತಲುಪಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದರು.

ಕೇಂದ್ರದ ಸರ್ಕಾರದ ಮುದ್ರಾ ಯೋಜನೆ, ಜನಧನ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಕೃಷಿ ಸಮ್ಮಾನ್ ಯೋಜನೆ, ಅನ್ನಭಾಗ್ಯ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿ ಎಲ್‍ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಡ್ರೋನ್‍ನಂತಹ ಸುಧಾರಿತ ತಂತ್ರಜ್ಞಾನದ ಬಳಕೆಯಾಗಬೇಕು. ನ್ಯಾನೋ ಯೂರಿಯಾ ಮತ್ತು ಇತರ ಕೀಟನಾಶಕಗಳನ್ನು ಸಿಂಪಡಿಸಲು ಕೈಗೆಟುಕುವ ದರದಲ್ಲಿ ರೈತರಿಗೆ ದೊರೆಯುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಅರಿವು ಮೂಡಿಸಬೇಕು ಎಂದರು.

ನಬಾರ್ಡ್‍ನ ವ್ಯವಸ್ಥಾಪಕ ನಿರ್ದೇಶಕ ಯುವರಾಜ್ ಕುಮಾರ್ ಮಾತನಾಡಿ, ಕೆಸಿಸಿ, ಪಿಎಂಜೆಜೆಬಿವೈ, ಪಿಎಂಎಸ್‍ಬಿವೈ, ಎಪಿವೈ, ಪಿಎಂ ಸ್ವಾನಿಧಿ, ಪಿಎಂ ವಿಶ್ವಕರ್ಮ, ಮುದ್ರಾ ಯೋಜನೆ, ಉಜ್ವಲ ಯೋಜನೆ ಮುಂತಾದ ಎಲ್ಲ ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಮಾತನಾಡಿ, ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆ ಪಡೆಯಲು ಎಲ್ಲ ನಾಗರಿಕರು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಕಾರ್ಡ್ ಪಡೆಯಬೇಕು ಎಂದರು.

ಕೇಂದ್ರ ಸರ್ಕಾರವು ಟಿಬಿ ನಿರ್ಮೂಲನಾ ಕಾರ್ಯಕ್ರಮದಡಿ ಫಲಾನುಭವಿಗಳ ಪೌಷ್ಟಿಕಾಂಶದ ವೆಚ್ಚಗಳಿಗಾಗಿ ಮಾಸಿಕ ₹500 ಗಳನ್ನು ಡಿಬಿಟಿ ಮೂಲಕ ನೀಡಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿಯ ಕಿರುಪುಸ್ತಕ ಹಾಗೂ 2024ರ ಕ್ಯಾಲೆಂಡರ್ ವಿತರಿಸಲಾಯಿತು.

ಜಿಲ್ಲಾ ಪ್ರಭಾರಿ ಜಿ. ಗೋಪಾಲಕೃಷ್ಣ, ಉಕ್ಕು ಸಚಿವಾಲಯದ ಉಪಕಾರ್ಯದರ್ಶಿ ಜಿ.ಪಿ. ಅಧ್ಯಕ್ಷ ಸಿದ್ದೇಶ್, ಎಲ್‍ಡಿಎಂ ಸೋಮನಗೌಡ ಐನಾಪೂರ ಸೇರಿದಂತೆ ಗ್ರಾಪಂ ಅಧ್ಯಕ್ಷರು, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.